ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ಉದ್ಯೋಗ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ಸೆ.11ರಂದು ಬೆಳಿಗ್ಗೆ 10.30 ರಿಂದ 3 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.

ಸಂದರ್ಶನದಲ್ಲಿ 3ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 3 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಅಗತ್ಯ ದಾಖಲೆಗಳು ಹಾಗೂ ಫೋಟೊಗಳೊಂದಿಗೆ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ಸ್ಟೇಡಿಯಂ ರಸ್ತೆಯಲ್ಲಿನ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 7019759147 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read