BIG NEWS: ಪುಕ್ಸಟ್ಟೆ ಕೊಡುಗೆಗಳಿಂದ ಬಡತನ ನಿರ್ಮೂಲನೆ ಅಸಾಧ್ಯ: ಇನ್ಫೋಸಿಸ್ ನಾರಾಯಣ ಮೂರ್ತಿ

ಮುಂಬೈ: “ಕೇವಲ ಉಚಿತ ಕೊಡುಗೆಗಳನ್ನು ಕೊಡುವುದರಿಂದ ದೇಶದಲ್ಲಿನ ಬಡತನ ನಿರ್ಮೂಲನೆ ಅಸಾಧ್ಯ. ಉದ್ಯೋಗ ಸೃಷ್ಟಿಯಿಂದ ಮಾತ್ರವೇ ಅಭಿವೃದ್ಧಿ ಸಾಧ್ಯ.”

ಹೀಗೆಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಹೇಳಿದ್ದಾರೆ. ಮುಂಬೈನಲ್ಲಿ ನಡೆದ ಟೈಕೂನ್ ಮುಂಬೈ -2025 ಸಮಾವೇಶದಲ್ಲಿ ಮಾತನಾಡಿದ ಅವರು, ಕೇವಲ ಉಚಿತ ಕೊಡುಗೆ ಕೊಟ್ಟರೆ ಬಡತನ ಮಾಯವಾಗುತ್ತದೆ ಎಂದುಕೊಂಡಿದ್ದರೆ ಅದು ಅಸಾಧ್ಯ. ಇದುವರೆಗೆ ಉಚಿತ ಕೊಡುಗೆಗಳನ್ನು ಕೊಟ್ಟಿರುವ ಯಾವ ದೇಶವೂ ಬಡತನದಿಂದ ಹೊರಬಂದಿಲ್ಲ. ಇದರ ಬದಲಿಗೆ ನಾವು ಹೆಚ್ಚು ಉದ್ಯಮಗಳನ್ನು ಸ್ಥಾಪಿಸಬೇಕು. ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಬೇಕು ಎಂದು ಹೇಳಿದ್ದಾರೆ.

ಉಚಿತ ವಿದ್ಯುತ್ ಉದಾರಣೆಯಾಗಿ ನೀಡಿದ ಇನ್ಫೋಸಿಸ್ ನಾರಾಯಣ ಮೂರ್ತಿ, ಉಚಿತ ವಿದ್ಯುತ್ ನಿಂದ ಮಕ್ಕಳಲ್ಲಿ ಓದುವ ಹವ್ಯಾಸ ಹೆಚ್ಚಿದೆಯೇ ಅಥವಾ ಪೋಷಕರ ಕಾಳಜಿ ಹೆಚ್ಚಿದೆಯೇ ಎಂದು ಅರಿಯಲು ಆರು ತಿಂಗಳಿಗೊಮ್ಮೆ ಸಮೀಕ್ಷೆ ನಡೆಸಬಹುದಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read