GOOD NEWS: 25,000ಕ್ಕೂ ಹೆಚ್ಚು ಉದ್ಯೋಗಾವಕಾಶ; SSLC ಫೇಲ್ ಆದವರಿಗೂ ಸಿಗುತ್ತೆ ಕೆಲಸ; ಚೆನ್ನಪಟ್ಟಣದಲ್ಲಿ ನಾಳೆ ಬೃಹತ್ ಉದ್ಯೋಗ ಮೇಳ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಾಳೆ ಸರ್ಕಾರದ ವತಿಯಿಂದ ಬೃಹತ್ ಉದ್ಯೋಗ ಮೇಳ ಆಯೊಜಿಸಲಾಗಿದ್ದು, 25,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ.

ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಉದ್ಯೋಗ ಮೇಳ ಆಯೊಜಿಸಲಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಯೋಗ ಮೇಳ ಉದ್ಘಾಟಿಸಲಿದ್ದಾರೆ. ಉದ್ಯೋಗ ಮೆಳದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೋಮಾ ಮತ್ತು ಎಲ್ಲಾ ಪದವಿಧರರು ಪಾಲ್ಗೊಳಬಹುದು.

ಚನ್ನಪಟ್ಟಣದಲ್ಲಿ ನಡೆಯಲಿರುವ ಉದ್ಯೋಗ ಮೇಳದ ಬಗ್ಗೆ ರಾಮನಗರ ಡಿಸಿ ಯಶವಂತ್ ಗುರುಕಾರ್ ಮಾಹಿತಿ ನೀಡಿದ್ದು, ನಾಳೆ ನಡೆಯಲಿರುವ ಉದ್ಯೋಗ ಮೇಳದಲ್ಲಿ 25,000ಕ್ಕೂ ಹೆಚ್ಚು ಉದ್ಯೋಗ ಅವಕಾಶ ಇದೆ. 200ಕ್ಕೂ ಹೆಚ್ಚು ಕಂಪನಿಗಳಿಂದ ಉದ್ಯೋಗಕ್ಕೆ ಅವಕಾಶವಿದೆ. ಈಗಾಗಲೇ ಉದ್ಯೋಗಕ್ಕಾಗಿ 8 ಸಾವಿರ ಜನರು ನೋಂದಣಿ ಮಾಡಿಸಿದ್ದಾರೆ. 10ನೇ ತರಗತಿ ಫೇಲ್ ಆದವರಿಗೂ ಉದ್ಯೋಗ ಸಿಗಲಿದೆ. ಡಬಲ್ ಡಿಗ್ರಿ ಮಾಡಿದವರಿಗೂ ಉದ್ಯೋಗ ಸಿಗಲಿದೆ ಎಂದು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read