HomeLatest NewsJOB FAIR : ಜು.29 ರಂದು ಬೆಂಗಳೂರಿನಲ್ಲಿ ವಿಶೇಷ ಚೇತನ ಅಭ್ಯರ್ಥಿಗಳಿಗೆ ಉದ್ಯೋಗ ಮೇಳ...

JOB FAIR : ಜು.29 ರಂದು ಬೆಂಗಳೂರಿನಲ್ಲಿ ವಿಶೇಷ ಚೇತನ ಅಭ್ಯರ್ಥಿಗಳಿಗೆ ಉದ್ಯೋಗ ಮೇಳ ಆಯೋಜನೆ

ಬೆಂಗಳೂರು  :   ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕೇಂದ್ರ ಮತ್ತು ಯೂಥ್ 4 ಜಾಬ್ಸ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ವಿಶೇಷ ಚೇತನ ಅಭ್ಯರ್ಥಿಗಳಿಗಾಗಿ ಜುಲೈ 29 ರಂದು ಬೆಳಿಗ್ಗೆ 10.00 ಗಂಟೆಗೆ ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಛೇರಿ, ಸಿ.ಓ.ಇ. ಕಟ್ಟಡ , ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಆವರಣ, ತುಮಕೂರು ರಸ್ತೆ (ಮಾಡ್ರನ್ ಬ್ರೆಡ್ ಪ್ಯಾಕ್ಟರಿ ಹತ್ತಿರ), ಬೆಂಗಳೂರು-560022 ಇಲ್ಲಿ “ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ 15 ಕ್ಕೂ ಅಧಿಕ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು ತಮ್ಮ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುವುದು.

ಎಸ್.ಎಸ್.ಎಲ್.ಸಿ. ಉತ್ತೀರ್ಣ & ಅನುತ್ತೀರ್ಣ/ಪಿ.ಯು.ಸಿ/ಪದವಿ ಮತ್ತು ಇತರೆ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ, ಯು.ಡಿ.ಐ.ಡಿ ದಾಖಲೆ ಮತ್ತು ಇತ್ತೀಚಿನ ಭಾವಚಿತ್ರಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಪ್ರವೇಶ ಉಚಿತವಾಗಿದ್ದು, ಯಾವುದೇ ಶುಲ್ಕ ಇರುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕಂಪನಿಗಳು ತಮ್ಮ ಕಂಪನಿಗಳ ನಿಯಮಾನುಸಾರ ವೇತನ & ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕೇಂದ್ರ, ಸಿ.ಒ.ಇ ಕಟ್ಟಡ, ತುಮಕೂರು ರಸ್ತೆ, ಬೆಂಗಳೂರು- 560022 ಅಥವಾ ದೂರವಾಣಿ ಸಂಖ್ಯೆ: 080-29752338 ಮತ್ತು ಮೊಬೈಲ್ ಸಂಖ್ಯೆ 9945809276 / 7795739724 / 7019769281 ಅನ್ನು ಸಂಪರ್ಕಿಸಬಹುದುದಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸುವ ಮೂಲಕ ಉದ್ಯೋಗಮೇಳದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬೆಂಗಳೂರು, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular