ಆ.23 ರಂದು ವಿಶೇಷಚೇತನರಿಗಾಗಿ ಉದ್ಯೋಗ ಮೇಳ ಆಯೋಜನೆ

ಬಳ್ಳಾರಿ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಸಮರ್ಥನ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಆ.23 ರಂದು ಬೆಳಿಗ್ಗೆ 09 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಎಸ್.ಎನ್.ಪೇಟೆಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ಇಲ್ಲಿ ವಿಶೇಷಚೇತನರಿಗಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಅದೇ ದಿನದಂದು (ಆ.23 ರಂದು) ಬೆಳಿಗ್ಗೆ 09 ಗಂಟೆಗೆ ಬೆಂಗಳೂರಿನ ಜಯನಗರದ 4ನೇ ಬ್ಲಾಕ್ ನ 16 ನೇ ಮುಖ್ಯರಸ್ತೆಯ ಬಿಇ.ಎಸ್.ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿ ಕಾಲೇಜಿನಲ್ಲಿಯೂ ಸಹ ವಿಶೇಷಚೇತನರಿಗಾಗಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಬಳ್ಳಾರಿ ಜಿಲ್ಲೆಯ ವಿಕಲಚೇತನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಸಮರ್ಥನಂ ಸಂಸ್ಥೆಯ ಸಿಬ್ಬಂದಿ ವೀರಭದ್ರಪಾಟಿಲ್-9480812121, ಸುಭಾಷ್-9449864693 ಹಾಗೂ ಬಳ್ಳಾರಿಯ ಸಮರ್ಥನಂ ಸಂಸ್ಥೆಯ ಸಹಾಯವಾಣಿ ಸಂಖ್ಯೆ 08068333999, ಮೊ.9148793888, 8152808563, 9148792888, 9480812138 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read