ಕೊಡಗು : ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಹಾಗೂ ಗುಣಮಟ್ಟದ ಶಿಕ್ಷಕರನ್ನು ಹುಡುಕುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಉದ್ದೇಶದಿಂದ, ಮಾರ್ಚ್, 25 ರಿಂದ 27 ರವರೆಗೆ ನಗರದ ಕೊಡವ ಸಮಾಜದಲ್ಲಿ ಮೂರು ದಿನಗಳ ಸಮಗ್ರ ಶೈಕ್ಷಣಿಕ ಕಾರ್ಯಕ್ರಮ ಎಜು ಕನೆಕ್ಟ್ ಮತ್ತು ಜಾಬ್ ಮೇಳ 2026 ನಡೆಯಲಿದೆ.
ಈ ಬೃಹತ್ ಕಾರ್ಯಕ್ರಮವನ್ನು ರೀಡ್‍ಟೆಕ್ ಸಂಸ್ಥೆಯ ವತಿಯಿಂದ ಕೊಡಗು ವಿಶ್ವವಿದ್ಯಾಲಯ ಮತ್ತು ನ್ಯಾಚುರಲ್ ಸೋರ್ಸ್ ಡೆವಲಪ್ಮೆಂಟ್ ಸೆಂಟರ್ ಅವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.
ಈ ಮೇಳದಲ್ಲಿ ಪದವೀದರರು ಮತ್ತು ತರಬೇತಿ ಪಡೆದ ಶಿಕ್ಷಕರು (ಬಿ.ಇಡಿ, ಡಿ.ಇಡಿ, ಎಂ.ಇಡಿ, ಬಿ.ಪಿಇಡಿ, ಎಂಪಿ.ಇಡಿ) ಅನುಭವ ಹೊಂದಿದ ಶಿಕ್ಷಕರು, ಉಪನ್ಯಾಸಕರು ಹಾಗೂ ಬೋಧಕೇತರ ಉದ್ಯೋಗ ಹುಡುಕುವವರಿಗೆ ಸ್ಥಳದಲ್ಲಿಯೇ ನೋಂದಣಿ ಮತ್ತು ಸಂದರ್ಶನದ ಅವಕಾಶ ಇರಲಿದೆ. ಬೆಂಗಳೂರು ಮತ್ತು ಮೈಸೂರಿನ 12 ಪರಿಣಿತ ತರಬೇತುದಾರರಿಂದ, 12 ವಿವಿಧ ವಿಷಯಗಳ ಮೇಲೆ ಒಟ್ಟು 30 ವಿಶೇಷ ತರಬೇತಿ ಕಾರ್ಯಾಗಾರ ನಡೆಯಲಿದೆ.
ಕೊಡಗು ಜಿಲ್ಲೆಯ ಎಲ್ಲಾ ಉದ್ಯೋಗಾಕಾಂಕ್ಷಿ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಈ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಲು ಕೋರಿದೆ.ಹೆಚ್ಚಿನ ಮಾಹಿತಿಗೆ ದೂ.ಸಂ.6364558383 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.
ಮಾ.27 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.27 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಶಾಹಿ ಎಕ್ಸ್ಪೋರ್ಟ್, ಅಪೋಲೋ ಫಾರ್ಮಸಿ, ಮಹಾಂತ್ ಮೋಟಾರ್ಸ್ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

