HomeKarnatakaJOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಬಳ್ಳಾರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

JOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಬಳ್ಳಾರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನ.12 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.

ಮೇಳದಲ್ಲಿ 3 ರಿಂದ 4 ಕಂಪನಿಗಳು ಭಾಗವಹಿಸಲಿದ್ದು, ಇವರು ತಮ್ಮಲ್ಲಿರುವ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ನೇಮಕ ಮಾಡಿಕೊಳ್ಳುವರು. ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್ಕಾರ್ಡ್ ಪ್ರತಿ ಮತ್ತು ಸ್ವ-ವಿವರಗಳೊಂದಿಗೆ ಅಂದು ನಡೆಯುವ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular