HomeJobsಬಳ್ಳಾರಿ: ಮಾರ್ಚ್ 4ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಬಳ್ಳಾರಿ: ಮಾರ್ಚ್ 4ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಬಳ್ಳಾರಿಯಲ್ಲಿ ಕೆಲಸ ಹುಡುತ್ತಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಇದೆ. ಮಾರ್ಚ್ 4ರ ಬುಧವಾರ ಬಳ್ಳಾರಿಯಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದ್ದು, ಆಸಕ್ತರು ಸದುಪಯೋಗ ಪಡೆದುಕೊಳ್ಳಬಹುದು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ದೀನ್ ದಯಾಳ್ ಉಪಾದ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಹಾಗೂ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ಬಳ್ಳಾರಿ ಇವರುಗಳ ಸಂಯುಕ್ತಾಶ್ರಯದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಈ ಉದ್ಯೋಗ ಮೇಳ ಡಿಡಿಯು-ಜಿಕೆವೈ ಯೋಜನೆಯಡಿ ಮಾರ್ಚ್ 4ರಂದು ಬೆಳಗ್ಗೆ 9 ರಿಂದ 6 ಗಂಟೆಯವರೆಗೆ ನಗರದ ಶ್ರೀಮತಿ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗ ಮೇಳವನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಉದ್ಘಾಟಿಸಲಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ರುದ್ರಪ್ಪ ಪಾಟೀಲ್ ಪಾಲ್ಗೊಳ್ಳಲಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular