ಚಾಮರಾಜನಗರದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಯುವಜನರು ತಪ್ಪದೇ ಸದುಪಯೋಗಪಡಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಶ್ರೀರೂಪ ಕರೆ ನೀಡಿದ್ದಾರೆ.
ವಿವಿಧ ಖಾಸಗಿ ಸಂಸ್ಥೆಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿದ್ದು, ನೂರಾರು ಉದ್ಯೋಗಾವಕಾಶಗಳು ಲಭ್ಯವಿದೆ. ಅಭ್ಯರ್ಥಿಗಳು ನಿಮ್ಮ ಶೈಕ್ಷಣಿಕ ದಾಖಲೆಗಳು, ರೆಸ್ಯೂಮ್ ಜೊತೆ ಹಾಜರಾಗಿ ಎಂದು ಮನವಿ ಮಾಡಲಾಗಿದೆ.
ಹೊಸ ಅವಕಾಶಗಳನ್ನು ಅನ್ವೇಷಿಸಿ, ನಿಮ್ಮ ಭವಿಷ್ಯ ರೂಪಿಸಿಕೊಳ್ಳಿ. ಯುವಕರೇ ಈ ಅವಕಾಶ ಕಳೆದುಕೊಳ್ಳಬೇಡಿ. ನಿಮ್ಮ ಪ್ರತಿಭೆಗೆ ತಕ್ಕ ಉದ್ಯೋಗಕ್ಕಾಗಿ ಈ ಮೇಳವೇ ಉತ್ತಮ ವೇದಿಕೆ ಎಂದು ತಿಳಿಸಲಾಗಿದೆ.
ಉದ್ಯೋಗ ಮೇಳದ ವಿವರ: ದಿನಾಂಕ 27-02-2026ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಹೆಚ್ ಪಟೇಲ್ ಸಭಾಂಗಣ, ಚಾಮರಾಜನಗರ ಇಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ.
ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು, DAY-NRLM, DDU-GKY, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಚಾಮರಾಜನಗರ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಚಾಮರಾಜನಗರ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದೆ.
ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸಿ, ಅವರ ಜೀವನ ಮಟ್ಟವನ್ನು ಸುಧಾರಿಸಿ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸುವುದು ಉದ್ಯೋಗ ಮೇಳದ ಮುಖ್ಯ ಉದ್ದೇಶವಾಗಿರುತ್ತದೆ. ಈ ಉದ್ಯೋಗ ಮೇಳದಲ್ಲಿ ವಿವಿಧ ಕ್ಷೇತ್ರಗಳ 100ಕ್ಕೂ ಹೆಚ್ಚು ಸಂಖ್ಯೆಯ ಕಂಪನಿಗಳು ಭಾಗವಹಿಸುತ್ತಿವೆ.
ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ.ಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿರುವವರಿಂದ ಪ್ರಾರಂಭವಾಗಿ ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ನಿರುದ್ಯೋಗಿ ಯುವಕ/ ಯುವತಿಯರೂ ಸಹ ಉದ್ಯೋಗ ಪಡೆಯಲು ಇದೊಂದು ಉತ್ತಮ ವೇದಿಕೆಯಾಗಿದೆ.

ಆದ್ದರಿಂದ, ಚಾಮರಾಜನಗರ ಜಿಲ್ಲೆಯ ಪ್ರತಿಯೊಬ್ಬ ನಿರುದ್ಯೋಗಿ ಯುವಕ, ಯುವತಿಯರು ತಮ್ಮ ವಿವರಗಳನ್ನು ಗೂಗಲ್ ಲಿಂಕ್ QR Code ಮೂಲಕ ನೋಂದಾಯಿಸಿಕೊಳ್ಳತಕ್ಕದ್ದು. ಲಿಂಕ್ https://forms.gle/wDH6UpVGrtPCPhLJ7

