HomeJobsಧಾರವಾಡ ಜಿಲ್ಲಾ ಮಟ್ಟದ ಉದ್ಯೋಗ ಮೇಳ: ಹೆಸರು ನೋಂದಣಿಗೆ ಫೆ.21 ಕೊನೆ ದಿನ

ಧಾರವಾಡ ಜಿಲ್ಲಾ ಮಟ್ಟದ ಉದ್ಯೋಗ ಮೇಳ: ಹೆಸರು ನೋಂದಣಿಗೆ ಫೆ.21 ಕೊನೆ ದಿನ

ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಕೌಶಲ್ಯ ಮಿಶನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಸಹಯೋಗದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಫೆಬ್ರವರಿ 22ರಂದು ಕರ್ನಾಟಕ ಕಾಲೇಜು ಆವರಣದಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗ ಆಕಾಂಕ್ಷಿಗಳು ತಮ್ಮ ಹೆಸರು ಹಾಗೂ ಶೈಕ್ಷಣಿಕ ವಿವರಗಳನ್ನು ದಾಖಲಿಸಲು ಫೆಬ್ರವರಿ 21 ಕೊನೆಯ ದಿನವಾಗಿದೆ.

ಈ ಉದ್ಯೋಗ ಮೇಳದಲ್ಲಿ 18 ರಿಂದ 45 ವರ್ಷ ವಯೋಮಿತಿಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಪದವಿ, ಸ್ನಾತಕೋತ್ತರ ಪದವಿ, ಐ.ಟಿ.ಐ, ಡಿಪ್ಲೊಮಾ, ಬಿಇ ಹಾಗೂ ವಿವಿಧ ಬೇರೆ ಬೇರೆ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ/ ಯುವತಿಯರು, ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಈ ಕುರಿತು ಮಾಹಿತಿ ನೀಡಿದ್ದು, ಫೆಬ್ರವರಿ 22ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯ ತನಕ ಉದ್ಯೋಗ ಮೇಳ ನಡೆಯಲಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular