HomeJobsಫೆ. 6ಕ್ಕೆ ರಾಯಚೂರು ಉದ್ಯೋಗ ಮೇಳ: ಬೇಗ ಹೆಸರು ನೋಂದಣಿ ಮಾಡಿಸಿ

ಫೆ. 6ಕ್ಕೆ ರಾಯಚೂರು ಉದ್ಯೋಗ ಮೇಳ: ಬೇಗ ಹೆಸರು ನೋಂದಣಿ ಮಾಡಿಸಿ

ರಾಯಚೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿ ಇದೆ. ರಾಯಚೂರಿನಲ್ಲಿ ಫೆಬ್ರವರಿ 6 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಹೆಸರು ನೋಂದಣಿ ಮಾಡಿಕೊಳ್ಳಲು ಕರೆ ನೀಡಲಾಗಿದೆ.

ರಾಯಚೂರು ಜಿಲ್ಲಾ ಉತ್ಸವ-2026ರ ಹಿನ್ನೆಲೆಯಲ್ಲಿ ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್, ಡಿಡಿಯು-ಜಿಕೆವೈ ಯೋಜನೆಯಡಿ ಜಿಲ್ಲಾ ಮಟ್ಟದ ಒಂದು ದಿನದ ಉದ್ಯೋಗ ಮೇಳವನ್ನು ನಗರದ ಕೃಷಿ ವಿವಿಯ ಆವರಣದಲ್ಲಿ ಆಯೋಜಿಸಲಾಗಿದೆ.

ಜನವರಿ 30ರ ಮಾಹಿತಿಯಂತೆ ಉದ್ಯೋಗ ಮೇಳಕ್ಕಾಗಿ 4,967 ಅಭ್ಯರ್ಥಿಗಳು ನೋಂದಣಿ ಮಾಡಿಸಿದ್ದಾರೆ. ಜಿಲ್ಲಾ ಮಟ್ಟದ ಉದ್ಯೋಗ ಮೇಳದ ಪೂರ್ವಭಾವಿ ಸಭೆಯನ್ನು ನಡೆಸಲಾಗಿದ್ದು, ಯಶಸ್ವಿಯಾಗಿ ಆಯೋಜಿಸಲು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಸಾಮಾನ್ಯ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರಿಂಗ್, ನರ್ಸಿಂಗ್ ಸೇರಿದಂತೆ ವಿವಿಧ ಅರೆ ವೈದ್ಯಕೀಯ ಕೋರ್ಸ್ ವ್ಯಾಸಂಗ ಮಾಡಿದವರಿಗೂ ಉದ್ಯೋಗಾವಕಾಶ ಕಲ್ಪಿಗುವ ಗುರಿ ಹೊಂದಲಾಗಿದೆ.

ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಮತ್ತು ಸ್ಥಳೀಯವಾಗಿ ಅಂದಾಜು 75ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣ ಉದ್ಯೋಗದಾತ ಕಂಪನಿಗಳು ಭಾಗವಹಿಸುತ್ತಿವೆ. ವಿದ್ಯಾವಂತ ಯುವಕ/ ಯುವತಿಯರಿಗೆ ಪ್ರತಿಷ್ಠಿತ ಖಾಸಗಿ ವಲಯದಲ್ಲಿ ಉದ್ಯೋಗವನ್ನು ಕಲ್ಪಿಸುವುದು ಮೇಳದ ಮುಖ್ಯ ಉದ್ದೇಶವಾಗಿದೆ.

ವಿವಿಧ ಕಂಪನಿಗಳು ತಮ್ಮಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಉದ್ಯೋಗಾಕಾಂಕ್ಷಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಮತ್ತು ಉದ್ಯೋಗಾಕಾಂಕ್ಷಿ ಯುವಕ/ ಯುವತಿಯರು ತಮ್ಮ ಕೌಶಲ್ಯಕ್ಕೆ ಅನುಗುಣವಾಗಿ ಉದ್ಯೋಗವನ್ನು ಆಯ್ಕೆಮಾಡಿಕೊಳ್ಳಲು ಅವಕಾಶವಿರುತ್ತದೆ.

ಸಾವಿರಾರೂ ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತ ಕಂಪೆನಿಗಳು ಈಗಾಗಲೇ ಮೇಳದಲ್ಲಿ ಭಾಗವಹಿಸಲು ನೋಂದಣಿ ಮಾಡಿಸಿದ್ದಾರೆ. ನೋಂದಣಿ ಸಂಖ್ಯೆ ಇನ್ನೂ ಹೆಚ್ಚಾಗುವ ನಿರೀಕ್ಷೆ ಇದೆ. ಮೇಳದಲ್ಲಿ ಆಯ್ಕೆಯಾದವರಿಗೆ ಸ್ಥಳದಲ್ಲಿಯೇ ಆಫರ್ ಲೆಟರ್ ಕೊಡಲಾಗುತ್ತದೆ.

ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು hhttps://udyogamela.ksdckarnataka.com ನಲ್ಲಿ ನೋಂದಾಯಿಸಿಕೊಳ್ಳಬಹುದು. ಉದ್ಯೋಗದಾತರು/ ಕಂಪನಿಗಳು ಸಹ ತಮ್ಮಲ್ಲಿ ಲಭ್ಯವಿರುವ ಖಾಲಿ ಹುದ್ದೆಗಳ ವಿವರಗಳೊಂದಿಗೆ hhttps://employer.ksdckarnataka.com/login ಜಾಲತಾಣದಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9538753304, 7975618955, 7676999304, 9845339241 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಮಾಹಿತಿ ನೀಡಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular