ಶಿವಮೊಗ್ಗದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ.
ಮಾರ್ಚ್ 27ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಪ್ರವೇಶ ಉಚಿತ.
ಈ ಉದ್ಯೋಗ ಮೇಳದಲ್ಲಿ ಶಾಹಿ ಎಕ್ಸ್ಪೋರ್ಟ್, ಅಪೋಲೋ ಫಾರ್ಮಸಿ, ಮಹಾಂತ್ ಮೋಟಾರ್ಸ್ ಕಂಪನಿಗಳು ಭಾಗವಹಿಸಲಿದೆ. ನೇರ ಸಂದರ್ಶನದ ಮೂಲಕ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದು.
ಕರೆ ಮಾಡಲು ದೂರವಾಣಿ ಸಂಖ್ಯೆಗಳು 9380663606/ 9108235132.

