ಬಹುರಾಷ್ಟ್ರೀಯ ಕಂಪನಿ, ಕೈಗಾರಿಕೆಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ: ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಮಾರ್ಚ್ 15 ರಂದು ನಗರದ ಸರ್ಕಾರಿ ಐಟಿಐ ಕಾಲೇಜ್‍ನ ಆವರಣದಲ್ಲಿ  ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಉದ್ಯೋಗದಾತ 40 ಕ್ಕೂ ಹೆಚ್ಚು ಬೃಹತ್ ಬಹುರಾಷ್ಟ್ರೀಯ ಕಂಪನಿಗಳು, ಕೈಗಾರಿಕೆಗಳು ಭಾಗವಹಿಸುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಸುಮಾರು ಅವಶ್ಯಕವಿರುವ 3000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಯುವಕ, ಯುವತಿಯರನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಯುವಕ ಯುವತಿಯರು ತಮ್ಮ ವಿದ್ಯಾರ್ಹತೆಯ ದಾಖಲಾತಿಗಳೊಂದಿಗೆ  ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಪಡೆದವರು ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕ್ಯೂ.ಆರ್ ಕೋಡ್ ಲಿಂಕ್, Google Form Link: https://tinyurl.com/mnm8vykz , EªÉÄïï Lr: dsmodvg@gmail.com ದೂ.ಸಂ: 08192-259447, 7892956667 ಸಂಪರ್ಕಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಹಾಗೂ ಜಿ.ಪಂ ಸಿಇಓ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read