HomeKarnatakaಬಹುರಾಷ್ಟ್ರೀಯ ಕಂಪನಿ, ಕೈಗಾರಿಕೆಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ: ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಬಹುರಾಷ್ಟ್ರೀಯ ಕಂಪನಿ, ಕೈಗಾರಿಕೆಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ: ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಮಾರ್ಚ್ 15 ರಂದು ನಗರದ ಸರ್ಕಾರಿ ಐಟಿಐ ಕಾಲೇಜ್‍ನ ಆವರಣದಲ್ಲಿ  ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಉದ್ಯೋಗದಾತ 40 ಕ್ಕೂ ಹೆಚ್ಚು ಬೃಹತ್ ಬಹುರಾಷ್ಟ್ರೀಯ ಕಂಪನಿಗಳು, ಕೈಗಾರಿಕೆಗಳು ಭಾಗವಹಿಸುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಸುಮಾರು ಅವಶ್ಯಕವಿರುವ 3000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಯುವಕ, ಯುವತಿಯರನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಯುವಕ ಯುವತಿಯರು ತಮ್ಮ ವಿದ್ಯಾರ್ಹತೆಯ ದಾಖಲಾತಿಗಳೊಂದಿಗೆ  ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಪಡೆದವರು ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕ್ಯೂ.ಆರ್ ಕೋಡ್ ಲಿಂಕ್, Google Form Link: https://tinyurl.com/mnm8vykz , EªÉÄïï Lr: [email protected] ದೂ.ಸಂ: 08192-259447, 7892956667 ಸಂಪರ್ಕಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಹಾಗೂ ಜಿ.ಪಂ ಸಿಇಓ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular