ಶಿವಮೊಗ್ಗ : ಡೈರೆಕ್ಟೋರೇಟ್ ಜನರಲ್ ರಿಸೆಟ್ಲ್ ಮೆಂಟ್ ಇವರ ಪ್ರಾಯೋಜಕತ್ವದಲ್ಲಿ ಮಾಜಿ ಸೈನಿಕರಿಗಾಗಿ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಅಂಡ್ ಸೆಂಟರ್, ಬೆಂಗಳೂರು ಇಲ್ಲಿ ಫೆ 27 ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ಮಾಜಿ ಸೈನಿಕರು, ಮಾಜಿ ಸೈನಿಕ ಗುರುತಿನ ಚೀಟಿ ಮತ್ತು ಬಯೊಡೇಟದ 5 ಪ್ರತಿಗಳೊಂದಿಗೆ ನೇರವಾಗಿ ಭಾಗವಹಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 020-26341217/011-20863432 ಹಾಗೂ ವೆಬ್‌ಸೈಟ್ [email protected],/ [email protected] ಅನ್ನು ಸಂಪರ್ಕಿಸಬಹುದು.
ಫೆ. 28 ರೊಳಗೆ ವರ್ತಕರ ಪರವಾನಿಗೆ ನವೀಕರಿಸಲು ಸೂಚನೆ
ಶಿವಮೊಗ್ಗ ಫೆಬ್ರವರಿ 06 (ಕರ್ನಾಟಕ ವಾರ್ತೆ): ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 2016 ರಿಂದ 2026 ನೇ ಸಾಲಿಗೆ ಲೈಸೆನ್ಸ್ ಪಡೆದ ವರ್ತಕರ ಪರವಾನಿಗೆ ಅವಧಿಯು 2026 ರ ಮಾರ್ಚ್ 31 ರಂದು ಮುಕ್ತಾಯಗೊಳಲ್ಲಿದ್ದು, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ಅಧಿನಿಯಮ 1966 ರ ಕಲಂ 72 ಮತ್ತು ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ನಿಯಮಾವಳಿ 1968 ರ ನಿಯಮ 76(ಎ) ಲೈಸೆನ್ಸ್ ನವೀಕರಿಸಲು ಇಚ್ಛಿಸುವ ಪೇಟೆಕಾರ್ಯಕರ್ತರು ನಿಗಧಿತ ಲೈಸೆನ್ಸ್ ಫಾರಂನ್ನು ಭರ್ತಿ ಮಾಡಿ, ನಿಗಧಿತ ಶುಲ್ಕ ಪಾವತಿಸಿ, ಅವಶ್ಯಕ ದಾಖಲೆಗಳೊಂದಿಗೆ ಫೆ. 28 ರೊಳಗಾಗಿ ಕಾರ್ಯದರ್ಶಿ, ಎಪಿಎಂಸಿ, ಶಿವಮೊಗ್ಗ ಮತ್ತು ಉಪ/ಸಹಾಯಕ ನಿರ್ದೇಶಕರು, ಕೃಷಿ ಮಾರಾಟ ಇಲಾಖೆ, ಶಿವಮೊಗ್ಗ ಇವರಿಗೆ ಸಲ್ಲಿಸುವುದು. ಫೆ. 28 ರ ನಂತರ ಲೈಸೆನ್ಸ್ ಗಳನ್ನು ನವೀಕರಿಸಲು ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ನಿಗಧಿತ ಅವಧಿಯೊಳಗೆ ಅರ್ಜಿ ಸಲ್ಲಿಸುವುದು, ತಪ್ಪಿದಲ್ಲಿ ವರ್ತಕರೇ ಹೊಣೆಗಾರರಾಗಿರುತ್ತೀರಿ ಹಾಗೂ ಸಮಿತಿಯಿಂದ ನಿಯಮಾನುಸಾರ ಕಾನೂನಾತ್ಮಕ ಕ್ರಮಗೊಳ್ಳಲಾಗುವುದು ಎಂದು ಕೃಷಿ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸುವುದು.

