HomeKarnatakaಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ: ಆಸಕ್ತರಿಗೆ ಇಲ್ಲಿದೆ ಮಾಹಿತಿ

ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ: ಆಸಕ್ತರಿಗೆ ಇಲ್ಲಿದೆ ಮಾಹಿತಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಆಗಸ್ಟ್ 30 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಎಎನ್‍ಎಮ್, ಜಿಎನ್‍ಎಮ್, ಬಿಎಸ್ಸಿ ನರ್ಸಿಂಗ್ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.  ಹೆಚ್ಚಿನ ಮಾಹಿತಿಗೆ 7483808321, 08192-259446 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular