SSLC, PUC, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಚಿತ್ರದುರ್ಗ: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸೆಪ್ಟೆಂಬರ್ 11 ರಂದು ಬೆಳಿಗ್ಗೆ 9 ರಿಂದ 5 ಗಂಟೆಯವರೆಗೆ ತುಮಕೂರು ಜಿಲ್ಲೆಯ ಶಿರಾ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಬಿಎ, ಬಿಕಾಂ, ಬಿಎಸ್ಸಿ, ಬಿಇ, ಬಿಸಿಎ, ಎಂಸಿಎ, ಎಂಕಾಂ ಹಾಗೂ ಇತರೆ ಎಲ್ಲಾ ಅರ್ಹ ಪದವೀಧರ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಪೋಟೋ, ಆಧಾರ್ ಕಾರ್ಡ್ ಹಾಗೂ ಬಯೋಡಾಟಾದೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಂಡು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು https://skillconnect.kaushalkar.com/candidatereg  ಇಲ್ಲಿ ಉಚಿತವಾಗಿ ನೋಂದಾಯಿಸಿ ಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9606492216 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read