HomeKarnatakaJob Fair : ಉದ್ಯೋಗಾಂಕ್ಷಿಗಳೇ ಗಮನಿಸಿ : ಜೂ.22 ರಂದು ಮಡಿಕೇರಿಯಲ್ಲಿ 'ಉದ್ಯೋಗ ಮೇಳ' ಆಯೋಜನೆ

Job Fair : ಉದ್ಯೋಗಾಂಕ್ಷಿಗಳೇ ಗಮನಿಸಿ : ಜೂ.22 ರಂದು ಮಡಿಕೇರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕುಶಾಲನಗರ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜು ಇವರ ಸಹಯೋಗದಲ್ಲಿ ಜೂನ್, 22 ರಂದು ಬೆಳಗ್ಗೆ 10.30 ಯಿಂದ ಮಧ್ಯಾಹ್ನ 3 ಗಂಟೆ ವರೆಗೆ ಕುಶಾಲನಗರದ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ, ದಿಯಾ ಸಿಸ್ಟಮ್ ಪ್ರೈವೇಟ್ ಲಿಮಿಟೆಡ್ ಮಂಗಳೂರು, ರಾಣಿ ಮದ್ರಾಸ್-ಮೈಸೂರು, ಜಸ್ಟ್ ಡಯಲ್-ಬೆಂಗಳೂರು, ಈಕ್ವಲೈಜರ್ ಆರ್‍ಎಂಸಿ-ಮೈಸೂರು, ಪ್ಯಾಲೆಸ್ ಟೊಯೋಟಾ ಕುಶಾಲನಗರ, ಅಲ್ಫಾ ಟೆಕ್ನಾಲಜಿ-ಮಡಿಕೇರಿ, ಪುಜಿಟೆಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ಎಸ್‍ಎಲ್‍ಎನ್ ಕಾಫಿ ಪ್ರೈವೇಟ್ ಲಿಮಿಟೆಡ್ ಕೂಡಿಗೆ, ಮ್ಯಾಜಿಕ್ ಬಸ್ ಇಂಡಿಯಾ ಬೆಂಗಳೂರು, ಪರ್ಪಲ್ ಪಾಲ್ಮ್ ರೆಸಾರ್ಟ್ ಮತ್ತು ಸ್ಪಾ-ಕುಶಾಲನಗರ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್ಸೆಸ್ಸೆಲ್ಸಿ ಕ್ಕಿಂತ ಕಡಿಮೆ, ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪೆÇ್ಲೀಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ಸ್ವಯಂ-ವಿವರ (ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ. 08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular