HomeKarnatakaBREAKING: ಇಂಟರ್ವ್ಯೂ ಗೆ ತೆರಳುತ್ತಿದ್ದಾಗ ಭೀರ ಕಾರು ಅಪಘಾತ: ಇಬ್ಬರು ಯುವತಿಯರು ಸ್ಥಳದಲ್ಲೇ ದುರ್ಮರಣ

BREAKING: ಇಂಟರ್ವ್ಯೂ ಗೆ ತೆರಳುತ್ತಿದ್ದಾಗ ಭೀರ ಕಾರು ಅಪಘಾತ: ಇಬ್ಬರು ಯುವತಿಯರು ಸ್ಥಳದಲ್ಲೇ ದುರ್ಮರಣ

ತುಮಕೂರು: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾತಾಲೂಕಿನ ತಾವರೆಕೆರೆಯಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು, ಡಿವೈಡರ್ ಗೆ ಗುದ್ದಿ ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಯುವತಿಯರು ಸ್ಥಳದಲ್ಲೇ ಮ್ರ‍ಿಉತಪಟ್ಟಿದ್ದಾರೆ. ಎರಡೂ ಕಾರುಗಳಲ್ಲಿದ್ದ ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿ.ಫಾರ್ಮ್ ಮುಗಿಸಿದ್ದ ಮೂವರು ಯುವತಿಯರು ಜಾಬ್ ಇಂಟರ್ವ್ಯೂ ಗೆಂದು ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್ ಗೆ ಗುದ್ದಿ ಪಲ್ಟಿಯಾಗಿದ್ದು, ಈ ದುರಂತಕ್ಕೆ ಕಾರಣವಾಗಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ನಿಸರ್ಗ (20) ಹಾಗೂ ರೂಪಾ (21) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನೋರ್ವ ಯುವತಿ ಹಾಗೂ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ನಾಲ್ವರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಿ ಫಾರ್ಮ್ ಮುಗಿಸಿ ಕೆಲಸ ಹುಡುಕುತ್ತಿದ್ದ ಮೂವರು ಯುವತಿಯರು ಬೆಂಗಳೂರಿನಲ್ಲಿ ಜಾಬ್ ಇಂಟರ್ವ್ಯೂ ಇದೆ ಎಂದು ತುಮಕೂರಿನಿಂದ ಕಾರು ಮಾಡಿಕೊಂಡು ಬೆಂಗಳೂರಿಗೆ ಬರುತ್ತಿದ್ದರು. ಒಳ್ಳೆಯ ಕೆಲಸದ ಕನಸು ಕಾಣುತ್ತ ಬದುಕನ್ನು ರೂಪಿಸಿಕೊಳ್ಳುವ ತವಕದಲ್ಲಿದ್ದ ಯುವತಿಯರು, ಮಾರ್ಗ ಮಧ್ಯೆಯೇ ಅಪಘಾತಕ್ಕೆ ಬಲಿಯಾಗಿರುವುದು ನಿಜಕ್ಕೂ ದುರಂತವೇ ಸರಿ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular