ಉದ್ಯೋಗ ವಾರ್ತೆ : ವಿಧಾನಸಭೆ ಸಚಿವಾಲಯದಲ್ಲಿ ವರದಿಗಾರರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ವಿಧಾನಸಭೆ  ಸಚಿವಾಲಯದಲ್ಲಿ ವರದಿಗಾರರ ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಬಗ್ಗೆ ಸರ್ಕಾರ ಅಧಿಸೂಚನೆ ಹೊರಡಿಸಿದ್ದು,ಕರ್ನಾಟಕ ವಿಧಾನ ಸಭೆ ಸಚಿವಾಲಯದ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಾವಳಿಗಳು 2003ರ ನಿಯಮ 6 (vii)ರ ಅವಕಾಶದಡಿ ಕರ್ನಾಟಕ ವಿಧಾನ ಸಭೆ ಸಚಿವಾಲಯದ ಕೆಳಕಂಡ ವಿವಿಧ ವೃಂದಗಳ ಹುದ್ದೆಗಳಿಗೆ ಅರ್ಹ
ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರಗಳು ಈ ಕೆಳಕಂಡಂತಿರುತ್ತದೆ.

1. ಹುದ್ದೆಯ ಹೆಸರು:
ಹುದ್ದೆಗಳ ಸಂಖ್ಯೆ:
ವರದಿಗಾರರು
ಕನ್ನಡ ವರದಿಗಾರರು – 02 ಹುದ್ದೆಗಳು
ಆಂಗ್ಲ ವರದಿಗಾರರು – 01 ಹುದ್ದೆ

ಮೀಸಲಾತಿ ವರ್ಗೀಕರಣ:
ಮೀಸಲಾತಿ ವರ್ಗೀಕರಣ: ಬ್ಯಾಕ್ಲಾಗ್ – ಕನ್ನಡ ವರದಿಗಾರರು – 02 ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30:04:2024

ಅರ್ಜಿ ಸಲ್ಲಿಸಬೇಕಾದ ವಿಳಾಸ: ಕಾರ್ಯದರ್ಶಿ, ಕರ್ನಾಟಕ ವಿಧಾನ ಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ:5074, ಮೊದಲನೆ ಮಹಡಿ, ವಿಧಾನ ಸೌಧ, ಬೆಂಗಳೂರು-560 001.

ಷರತ್ತುಗಳು 

ನಿಯಮಾವಳಿಗಳನುಸಾರ ಮೇಲ್ಕಂಡ ಹುದ್ದೆಗಳ ಭರ್ತಿಗಾಗಿ ಅರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ವಿಧಾನ ಸಭೆ ಸಚಿವಾಲಯಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು. (ಅರ್ಜಿ ನಮೂನೆಯು ಸರ್ಕಾರಿ ಮುದ್ರಣಾಲಯದಲ್ಲಿ ದೊರೆಯುವುದು).

ವಿದ್ಯಾರ್ಹತೆ: ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಾವಳಿಗಳು 1977ರ ಪ್ರಕಾರ ಅಭ್ಯರ್ಥಿಗಳು ನೇರ ನೇಮಕಾತಿಗೆ ಅರ್ಹತೆಯನ್ನು ಪಡೆದಿರಬೇಕು ಹಾಗೂ ಅವನು/ಅವಳು ಕೆಳಗೆ ತಿಳಿಸಿರುವ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು

ಕ್ರ.ಸಂ.
1
ಹುದ್ದೆಯ ಹೆಸರು
ಕನ್ನಡ ವರದಿಗಾರರು/ ಆಂಗ್ಲ ವರದಿಗಾರರು

ವಿದ್ಯಾರ್ಹತೆ

1. ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
2. ಕನ್ನಡ ವರದಿಗಾರರಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಪ್ರವೀಣ ದರ್ಜೆಯ ಕನ್ನಡ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಕನ್ನಡ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
3. ಅಂಗ್ಲ ವರದಿಗಾರರಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಪ್ರವೀಣ ದರ್ಜೆಯ ಆಂಗ್ಲ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಆಂಗ್ಲ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು
4. ಹಿಂದಿ ಪ್ರವೀಣ ದರ್ಜೆಯ ಶೀಘ್ರಲಿಪಿಯಲ್ಲಿ ಉತ್ತೀರ್ಣರಾದವರಿಗೆ ಆದ್ಯತೆ ನೀಡಲಾಗುವುದು

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read