ಡಿಜಿಟಲ್ ಡೆಸ್ಕ್ : ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕಾಲೇಜು ಮತ್ತು ಮೌಲನಾ ಆಜಾದ್ ಮಾದರಿ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕ ಮತ್ತು ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲು ಜೂ.01 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಅಲ್ಲಿಪುರದ ಹೊಸಪೇಟೆ ರಸ್ತೆಯ ಬಿಐಟಿಎಂ ಕಾಲೇಜು ಹತ್ತಿರದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಿಗದಿಪಡಿಸಲಾಗಿದೆ.
ಅತಿಥಿ ಶಿಕ್ಷಕರ ಮತ್ತು ಉಪನ್ಯಾಸಕರ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಪರೀಕ್ಷೆಯ ಪ್ರವೇಶ ಪತ್ರ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲನಾ ಆಜಾದ್ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ(ದೂ.08392-200125/224) ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.