BEL ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ 340 ಪ್ರೊಬೇಷನರಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದೆ. BEL ಅಧಿಕೃತ ಅಧಿಸೂಚನೆಯ ಮೂಲಕ ಪ್ರೊಬೇಷನರಿ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಶೈಕ್ಷಣಿಕ ಅರ್ಹತೆ
BEL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.Sc, BE/ B.Tech, ಪದವಿಯನ್ನು ಪೂರ್ಣಗೊಳಿಸಿರಬೇಕು. ಪ್ರೊಬೇಷನರಿ ಎಂಜಿನಿಯರ್ (ಎಲೆಕ್ಟ್ರಾನಿಕ್ಸ್): B.Sc/ BE/ B.Tech/ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ/ ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ/ ಸಂವಹನ/ ದೂರಸಂಪರ್ಕ ಎಂಜಿನಿಯರಿಂಗ್ನಲ್ಲಿ ಪದವಿ ಪ್ರೊಬೇಷನರಿ ಎಂಜಿನಿಯರ್ (ಮೆಕ್ಯಾನಿಕಲ್): B.Sc/ BE/ B.Tech/ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಪ್ರೊಬೇಷನರಿ ಎಂಜಿನಿಯರ್ (ಕಂಪ್ಯೂಟರ್ ಸೈನ್ಸ್): B.Sc/ BE/ B.Tech/ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ನಲ್ಲಿ ಪದವಿ ಪ್ರೊಬೇಷನರಿ ಎಂಜಿನಿಯರ್ (ಎಲೆಕ್ಟ್ರಿಕಲ್): B.Sc/ BE/ B.Tech/ ಎಲೆಕ್ಟ್ರಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ನಲ್ಲಿ ಪದವಿ
ವಯೋಮಿತಿ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-10-2025 ರಂತೆ 25 ವರ್ಷಗಳು
ವಯೋಮಿತಿ ಸಡಿಲಿಕೆ: OBC (NCL) ಅಭ್ಯರ್ಥಿಗಳು: 3 ವರ್ಷಗಳು SC, ST ಅಭ್ಯರ್ಥಿಗಳು: 5 ವರ್ಷಗಳು PwBD ಅಭ್ಯರ್ಥಿಗಳು: 10 ವರ್ಷಗಳು ಅರ್ಜಿ ಶುಲ್ಕ: ಸಾಮಾನ್ಯ/ OBC/ EWS ಅಭ್ಯರ್ಥಿಗಳು: ರೂ. 1,180/- SC/ST/EWS/PwBD/ ಮಾಜಿ ಸೈನಿಕರ ಅಭ್ಯರ್ಥಿಗಳು: ಇಲ್ಲ ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24-10-2025
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-ನವೆಂಬರ್-2025
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 14-11-2025
