HomeKarnatakaಕೆಲಸದ ಆಮಿಷವೊಡ್ಡಿ ಬರೋಬ್ಬರಿ 25 ಕೋಟಿ ವಂಚನೆ: ನ್ಯಾಯಾಧೀಶರ ಸಹಿಯನ್ನೇ ನಕಲು ಮಾಡಿದ್ದ ದಂಪತಿ ಅರೆಸ್ಟ್

ಕೆಲಸದ ಆಮಿಷವೊಡ್ಡಿ ಬರೋಬ್ಬರಿ 25 ಕೋಟಿ ವಂಚನೆ: ನ್ಯಾಯಾಧೀಶರ ಸಹಿಯನ್ನೇ ನಕಲು ಮಾಡಿದ್ದ ದಂಪತಿ ಅರೆಸ್ಟ್

ಬೆಂಗಳೂರು: ನ್ಯಾಯಾಲಯದಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ನೂರಾರು ಜನರನ್ನು ವಂಚಿಸಿದ್ದ ದಂಪತಿಯನ್ನು ಸೆಂಟ್ರಲ್ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಜೇಸನ್ ಡಿಸೋಜಾ ಮತ್ತು ಲವೀನಾ ಬಂಧಿತ ದಂಪತಿ. ಸರ್ಕಾರಿ ಕೆಲಸದ ಆಮಿಷವೊಡ್ಡಿ ಸುಮಾರು 25 ಕೋಟಿ ರೂ.ಗೂ ಹೆಚ್ಚು ಹಣ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.

ನಿರುದ್ಯೋಗಿಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವವರನ್ನು ಟಾರ್ಗೆಟ್ ಮಾಡಿ ಆರೋಪಿಗಳು ದೊಡ್ಡ ಮಟ್ಟದ ಮೋಸದ ಜಾಲವನ್ನು ಹೆಣೆದಿದ್ದರು. ಕೋರ್ಟ್‌ಗಳಲ್ಲಿ ಡಿ-ಗ್ರೂಪ್ ಉದ್ಯೋಗ ಕೊಡಿಸುವುದಾಗಿ ಹೇಳಿ ಒಬ್ಬೊಬ್ಬರಿಂದ 10ರಿಂದ 25 ಲಕ್ಷ ರೂಪಾಯಿಯವರೆಗೆ ಹಣ ವಸೂಲಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂಬಿಕೆ ಮೂಡಿಸಲು ನ್ಯಾಯಾಧೀಶರ ಸಹಿಯನ್ನು ನಕಲಿ ಮಾಡಿ ನೇಮಕಾತಿ ಆದೇಶ ಪತ್ರಗಳನ್ನು ನೀಡುತ್ತಿದ್ದರು. ನಂತರ ಉದ್ಯೋಗದ ಬಗ್ಗೆ ವಿಚಾರಿಸಿದಾಗ ನಾಳೆ, ನಾಡಿದ್ದು ಎಂದು ನೆಪ ಹೇಳಿ ದಿನ ದೂಡುತ್ತಾ ಕಾಲಹರಣ ಮಾಡುತ್ತಿದ್ದರು.

ಏಜೆಂಟ್‌ಗಳ ಮೂಲಕ ಜನರನ್ನು ಬಲೆಗೆ ಬೀಳಿಸುತ್ತಿದ್ದ ಆರೋಪಿಗಳು ಕೆಲವರನ್ನು ಖಾಸಗಿ ಹೋಟೆಲ್‌ಗಳಿಗೆ ಕರೆಸಿ ದಾಖಲೆ ಪರಿಶೀಲನೆ ಹೆಸರಿನಲ್ಲಿ ನಕಲಿ ಆಫರ್ ಲೆಟರ್ ತೋರಿಸಿ ಮೋಸ ಮಾಡಿದ್ದಾರೆ ಎಂಬುದು ತನಿಖೆಯಲ್ಲಿ ಬಯಲಾಗಿದೆ.

ದಂಪತಿ ಈ ಹಿಂದೆಯೂ 2024ರಲ್ಲಿ ಇದೇ ರೀತಿಯ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾದ್ದರು. ಆದರೂ ಬುದ್ಧಿ ಕಲಿಯದೇ ಮತ್ತದೇ ಹಳೇ ಚಾಳಿ ಮುಂದುವರೆಸಿದ್ದರು. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular