HomeJobsHAL ನಲ್ಲಿ ಮಾಜಿ ಸೈನಿಕರಿಗೆ ಉದ್ಯೋಗಾವಕಾಶ: ಇಲ್ಲಿದೆ ಮಾಹಿತಿ

HAL ನಲ್ಲಿ ಮಾಜಿ ಸೈನಿಕರಿಗೆ ಉದ್ಯೋಗಾವಕಾಶ: ಇಲ್ಲಿದೆ ಮಾಹಿತಿ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(HAL) ಬೆಂಗಳೂರು ಇಲ್ಲಿ ಸೆಕ್ಯೂರಿಟಿ ಗಾರ್ಡ್ ಮತ್ತು ಫೈಮೆನ್ ಹುದ್ದೆಗಳಿಗೆ ನಾಲ್ಕು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ನೇಮಕಾತಿಯು ದೈಹಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಗಳ ಮೆರಿಟ್ ಆಧಾರದಲ್ಲಿ ನಡೆಯುವುದು. ಆಯ್ಕೆಯಾದವರು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಆಯ್ಕೆಯಾದವರಿಗೆ 21000/- ರೂ.ಗಳ ಮೂಲ ವೇತನವಿದ್ದು, ತುಟ್ಟಿ ಭತ್ಯೆ ಹಾಗೂ ಇತರೆ ಭತ್ಯೆಗಳು ಕೂಡ ಲಭ್ಯವಿದೆ.

ಆಸಕ್ತ ಮಾಜಿ ಸೈನಿಕರು ನಿಗದಿತ ನಮೂನೆಯ ಅರ್ಜಿಯನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ 26 ರೊಳಗೆ ಸಲ್ಲಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವAತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular