HomeLatest Newsಅರ್ಹ ವೈದ್ಯರಿಗೆ ಉದ್ಯೋಗ ಭಾಗ್ಯ : ವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಕರೆ

ಅರ್ಹ ವೈದ್ಯರಿಗೆ ಉದ್ಯೋಗ ಭಾಗ್ಯ : ವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಕರೆ

ಶಿವಮೊಗ್ಗ :   ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಬ್ಯಾಕೋಡು, ತುಮರಿ, ಆವಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ & ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಫೆ. 06 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 1.00ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬAಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಮತ್ತು ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222382 ನ್ನು ಸಂಪರ್ಕಿಸುವುದು.

“ಸ್ವಾತಂತ್ರ್ಯದ ಓಟ” ಕಾದಂಬರಿಯ ರಂಗಪ್ರಯೋಗಕ್ಕೆ ಅರ್ಜಿ ಸಲ್ಲಿಸಿದ ಕಲಾವಿದರ ಸಂದರ್ಶನಕ್ಕೆ ಕರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ :  ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಬೊಳುವಾರು ಮೊಹಮ್ಮದ್ ಕುಂಞ ಅವರ ಸ್ವಾತಂತ್ರ್ಯದ ಓಟ ಕಾದಂಬರಿಯನ್ನು ನಾಟಕ ರೂಪದಲ್ಲಿ ರಂಗಾಯಣ, ಶಿವಮೊಗ್ಗ ನಿರ್ಮಾಣ ಮಾಡಿ ರಾಜ್ಯಾದ್ಯಂತ ಪ್ರದರ್ಶಿಸುವ ಯೋಜನೆ ಹಮ್ಮಿಕೊಂಡಿದ್ದು, ಆಸಕ್ತ ರಂಗ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಿದ ಕಲಾವಿದರಿಗೆ ಫೆ. 11 ರಂದು ಬೆಳಗ್ಗೆ 10.00 ರಿಂದ ಸಂಜೆವರೆಗೆ ರಂಗಾಯಣ, ಸುವರ್ಣ ಸಂಸ್ಕೃತಿ ಭವನ, ಹೆಲಿಪ್ಯಾಡ್ ಹಿಂಭಾಗ, ಅಶೋಕನಗರ, ಶಿವಮೊಗ್ಗ 577201 ಇಲ್ಲಿ ಸಂದರ್ಶನವನ್ನು ಏರ್ಪಡಿಸಲಾಗಿದೆ.

ಅರ್ಜಿ ಸಲ್ಲಿಸಿರುವ ಕಲಾವಿದರು ತಮ್ಮ ಮೂಲ ದಾಖಲಾತಿಗಳೊಂದಿಗೆ ನಿಗದಿತ ಸಮಯದಲ್ಲಿ ಸಂದರ್ಶನಕ್ಕೆ ಹಾಜರಾಗುವಂತೆ ರಂಗಾಯಣ ಆಡಳಿತಾಧಿಕಾರಿ ಡಾ.ಶೈಲಜಾ ಎ. ಸಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗೆ ರಂಗಾಯಣ, ಶಿವಮೊಗ್ಗ ಕಚೇರಿ, ದೂರವಾಣಿ ಸಂಖ್ಯೆ : 08182-256353 ನ್ನು ಸಂಪರ್ಕಿಸುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular