HomeJobsಎಸ್ಎಸ್ಎಲ್ಸಿ, ಪಿಯುಸಿ, ಪದವೀಧರರಿಗೆ ಉದ್ಯೋಗಾವಕಾಶ: ಅ.16 ರಂದು ವಾಕ್ ಇನ್ ಇಂಟರ್‌ ವ್ಯೂವ್

ಎಸ್ಎಸ್ಎಲ್ಸಿ, ಪಿಯುಸಿ, ಪದವೀಧರರಿಗೆ ಉದ್ಯೋಗಾವಕಾಶ: ಅ.16 ರಂದು ವಾಕ್ ಇನ್ ಇಂಟರ್‌ ವ್ಯೂವ್

ಕೊಪ್ಪಳ: ಗಂಗಾವತಿಯ ಎಲ್‌ಜಿ ರಸ್ತೆಯ ಭಾರತಿ ಆರ್ಕೇಡ್‌ನಲ್ಲಿರುವ ಎಯು ಸ್ಮಾಲ್ ಫಿನಾನ್ಸ್ ಬ್ಯಾಂಕ್ ಲಿ. ನಲ್ಲಿ ಅಕ್ಟೋಬರ್ 16 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ವಾಕ್ ಇನ್ ಇಂಟರ್‌ವ್ಯೂವ್ ನಡೆಯಲಿದೆ.

ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಇತರೆ ಪದವಿ ಪಡೆದ 18 ರಿಂದ 30 ವರ್ಷದೊಳಗಿನ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವAತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular