HomeJobsರಾಜ್ಯದ ಯುವ ಜನತೆಗೆ ಉದ್ಯೋಗಾವಕಾಶ: ಫೆ.2 ರಂದು ವಿಜಯಪುರ, ಫೆ.6 ರಂದು ರಾಯಚೂರಿನಲ್ಲಿ ಉದ್ಯೋಗ ಮೇಳ

ರಾಜ್ಯದ ಯುವ ಜನತೆಗೆ ಉದ್ಯೋಗಾವಕಾಶ: ಫೆ.2 ರಂದು ವಿಜಯಪುರ, ಫೆ.6 ರಂದು ರಾಯಚೂರಿನಲ್ಲಿ ಉದ್ಯೋಗ ಮೇಳ

ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ರಾಜ್ಯದ ಯುವಜನತೆಗಾಗಿ ಕೌಶಲ್ಯದೊಂದಿಗೆ ಉದ್ಯೋಗವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಫೆಬ್ರವರಿ 2 ರಂದು ವಿಜಪುರದಲ್ಲಿ ಹಾಗೂ ಫೆ.6 ರಂದು ರಾಯಚೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಫೆ.2 ರಂದು ವಿಜಯಪುರದ ಸ್ಟೇಷನ್ ರಸ್ತೆಯ ದರಬಾರ ಹೈಸ್ಕೂಲ್ ಆವರಣದಲ್ಲಿ ಯುವ ಸಮೃದ್ಧಿ ಸಮ್ಮೇಳನವನ್ನು ಆಯೋಜಿಸಲಾಗಿದೆ. ಆಸಕ್ತರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೋಂದಣಿ ಲಿಂಕ್:  https://udyogamela.ksdckarnataka.com/  ಬಳಸಿ ನೋಂದಣಿ ಮಾಡಿಕೊಳ್ಳಬೇಕು.

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ರಾಯಚೂರು, ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (DDUGKY) ಇವರುಗಳ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 6 ರಂದು ರಾಯಚೂರಿನ ಕೃಷಿ ಮಹಾವಿದ್ಯಾಲಯ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ-2026 ವನ್ನು ಆಯೋಜಿಸಲಾಗಿದೆ. ಆಸಕ್ತರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮೇಳದ ನೋಂದಣಿ ಲಿಂಕ್ :  https://forms.mynoukri.com/raichurcandidate  ಬಳಸಿ ನೋಂದಣಿ ಮಾಡಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular