HomeJobsಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ: ನ.5 ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ

ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ: ನ.5 ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 5 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ನೆಕ್ಸ್ ಚರ್ ಮತ್ತು ಮುತ್ತೂಟ್ ಮನಿ ಪ್ರೈ.ಲಿ., ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.

ದಿನಾಂಕ: 05-11-2026 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದ್ದು, ಪಿ.ಯು.ಸಿ. ಹಾಗೂ ಯಾವುದೇ ಪದವಿ ಪಡೆದ 18 ರಿಂದ 35 ವರ್ಷದ ಒಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕಾಗಿ ವಿನಂತಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 9380663606ಗಳಿಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ 43 ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ 43 ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ‘ಗ್ರಾಮ ಒನ್’ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಸರ್ಕಾರದ ಹಲವಾರು ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ.

ಈ ನಿಟ್ಟಿನಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಸರ್ಕಾರದ ನೂತನ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಅಧಿಕೃತ ವೆಬ್‌ಸೈಟ್ https://Sevaone.karnataka.gov.in/services/login ನಲ್ಲಿ ಆನ್‌ಲೈನ್ ಮೂಲಕ ಮಾತ್ರವೇ ಸಲ್ಲಿಸತಕ್ಕದ್ದು. ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಆನ್‌ಲೈನ್ ಅರ್ಜಿ ಸಲ್ಲಿಸಲು 2026ರ ನವೆಂಬರ್ 15 ಕೊನೆಯ ದಿನಾಂಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ತಿಳಿಸಿದ್ದಾರೆ.

ವಿಕಲಚೇತನರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಡಿಸೆಂಬರ್ 3 ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ, ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ವ್ಯಕ್ತಿಗಳು, ಸಂಸ್ಥೆಗಳು ಮತ್ತು ವಿಶೇಷ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತರು ಇಲಾಖೆಯ ಅಧಿಕೃತ ವೆಬ್‌ಸೈಟ್ dwdsc.karnataka.gov.in ಮೂಲಕ ಅರ್ಜಿ ನಮೂನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಥವಾ ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಕಚೇರಿ, ಕಾಮಾಕ್ಷಿ ಬೀದಿ, ಗಣಪತಿ ದೇವಸ್ಥಾನದ ಹತ್ತಿರ, ಶಿವಮೊಗ್ಗ ಇಲ್ಲಿಂದಲೂ ಅರ್ಧಿಯನ್ನು ಪಡೆಯಬಹುದಾಗಿದೆ.

ಅರ್ಜಿದಾರರು ಜಿಲ್ಲಾ, ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾಡಿದ ಸಾಧನೆಗಳ ಬಗ್ಗೆ ಲಗತ್ತಿಸಿದ ಪ್ರಮಾಣ ಪತ್ರಗಳನ್ನು ಕ್ರಮ ಸಂಖ್ಯೆಯೊಂದಿಗೆ ನಮೂದಿಸಬೇಕು. ಸಂಬಂಧಿಸಿದ ದಾಖಲೆಗಳ ಹಾರ್ಡ್ ಹಾಗೂ ಸಾಫ್ಟ್‌ ಕಾಪಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿದ ಪ್ರಸ್ತಾವನೆಯನ್ನು ನವೆಂಬರ್ 09 ರೊಳಗೆ ಕಚೇರಿಗೆ ಖುದ್ದಾಗಿ ತಲುಪಿಸುವಂತೆ ತಿಳಿಸಲಾಗಿದೆ. ಅಂತಿಮ ದಿನಾಂಕದ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08182-251676 ಅನ್ನು ಸಂಪರ್ಕಿಸი ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular