HomeJobsವಿವಿಧೆಡೆ ಉದ್ಯೋಗ ಅವಕಾಶ: ಆಸಕ್ತರಿಗೆ ಇಲ್ಲಿದೆ ಗುಡ್ ನ್ಯೂಸ್

ವಿವಿಧೆಡೆ ಉದ್ಯೋಗ ಅವಕಾಶ: ಆಸಕ್ತರಿಗೆ ಇಲ್ಲಿದೆ ಗುಡ್ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಏಪ್ರಿಲ್ 16 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆವರೆಗೆ ಉದ್ಯೋಗ ಮೇಳ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ ರಾಣಿ ಮದ್ರಾಸ್ ಪ್ರೈ.ಲಿ., ಮೈಸೂರು, ಆಟೋ ಲೈವ್, ಕಾಡಕೊಳ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಕೂರ್ಗ್ ಜಂಗಲ್ ಕ್ಯಾಂಪ್ ರೆಸಾರ್ಟ್, ಕುಶಾಲನಗರ, ಮುತ್ತೂಟ್ ಪೈನಾನ್ಸ್, ಮೈಸೂರು, ಕಾವೇರಿ ಹೊಂಡಾ, ಕುಶಾಲನಗರ, ಪ್ಯಾಲೇಸ್ ಟಯೋಟ ಕಾರ್ ಶೋ ರೂಂ, ಕುಶಾಲನಗರ ಹಾಗೂ ಪರ್ಪಲ್ ಪಾಮ್ಸ್ ರೆಸಾರ್ಟ್, ಕುಶಾಲನಗರ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. 

ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ(ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್-8296020826 ನ್ನು ಸಂಪರ್ಕಿಸಬಹುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular