HomeKarnatakaಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 2,200 ಲೈನ್‌ಮ್ಯಾನ್‌ಗಳ ನೇಮಕಾತಿಗೆ ನಿರ್ಧಾರ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 2,200 ಲೈನ್‌ಮ್ಯಾನ್‌ಗಳ ನೇಮಕಾತಿಗೆ ನಿರ್ಧಾರ

ಬೆಂಗಳೂರು: ರಾಜ್ಯದಾದ್ಯಂತ ಏಕಕಾಲದಲ್ಲಿ 2,200 ಲೈನ್‌ಮ್ಯಾನ್‌ಗಳ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಏಕಕಾಲದಲ್ಲಿ 2,200 ಲೈನ್‌ಮ್ಯಾನ್‌ಗಳ ನೇಮಕಾತಿ ನಡೆಯಲಿದೆ. ಸ್ಥಳೀಯರಿಗೆ ಹೆಚ್ಚು ಉದ್ಯೋಗ ದೊರೆಯಲಿದೆ. ಹಿಂದೆ ಲೈನ್‌ಮ್ಯಾನ್‌ಗಳ ನೇಮಕಾತಿ ಏಕಕಾಲದಲ್ಲಿ ನಡೆಯದೆ, ಒಂದು ಕಡೆ ಅರ್ಜಿ ಸಲ್ಲಿಸಿದವರು ಮತ್ತೊಂದು ಜಿಲ್ಲೆಗೂ ಅರ್ಜಿ ಹಾಕುತ್ತಿದ್ದರು. ಉದ್ಯೋಗ ಪಡೆದವರು ಕರ್ತವ್ಯಕ್ಕೆ ಗೈರಾಗುತ್ತಿದ್ದರು. ಇಂತಹ ಸಮಸ್ಯೆಗಳು ಆಗದಂತೆ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular