HomeKarnatakaಉದ್ಯೋಗ ವಾರ್ತೆ: ವಿವಿಧ ಕಂಪನಿಗಳಲ್ಲಿ ನೇರ ನೇಮಕಾತಿ; ಇಲ್ಲಿದೆ ಮಾಹಿತಿ

ಉದ್ಯೋಗ ವಾರ್ತೆ: ವಿವಿಧ ಕಂಪನಿಗಳಲ್ಲಿ ನೇರ ನೇಮಕಾತಿ; ಇಲ್ಲಿದೆ ಮಾಹಿತಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಏಪ್ರಿಲ್ 21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳುವ ಸಂಬಂಧ ಭಾಗವಹಿಸಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್‍ಎಸ್‍ಎಲ್‍ಸಿ, ಪಿಯುಸಿ, ಡಿಪ್ಲೊಮಾ, ಐಟಿಐ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 18 ರಿಂದ 30 ವರ್ಷದೊಳಗಿರುವ ಆಸಕ್ತರು ನೇರ ನೇಮಕಾತಿ ಸಂದರ್ಶನದಲ್ಲಿ ಭಾಗವಹಿಸಬಹುದು. 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಪೋಟೋಸ್, ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕೇಂದ್ರ ಚಿತ್ರದುರ್ಗ ಕಚೇರಿ ಹಾಗೂ ದೂರವಾಣಿ ಸಂಖ್ಯೆ 7022459064, 8310785143, 8105619020 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular