HomeKarnatakaSSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ಚಿತ್ರದುರ್ಗ: ಉದ್ಯೋಗ ಮತ್ತು ತರಬೇತಿ ಇಲಾಖೆ ವತಿಯಿಂದ ಇದೇ ಜುಲೈ 27 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಹತೆ:

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲಮೋ, ಬಿ.ಎ, ಬಿಕಾಂ, ಬಿಎಸ್ಸಿ, ಬಿಬಿಎಂ ಮತ್ತು ಇತರೆ ಪದವೀಧರರು. 18 ರಿಂದ 30 ವರ್ಷದೊಳಗಿರಬೇಕು.

ದಾಖಲೆಗಳು:

ಬಯೋಡಾಟ-6 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋ ತರಬೇಕು. ಮೇಳದಲ್ಲಿ ಭಾಗವಹಿಸುವರ ಸಂಸ್ಥೆಗಳು ಖಾಸಗಿ ಸಂಸ್ಥೆಯಾಗಿರುತ್ತದೆ. ಈ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 7022459064, 8105619020ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular