HomeKarnatakaಕೆಲಸದ ನಿರೀಕ್ಷೆಯಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಕೆಲಸದ ನಿರೀಕ್ಷೆಯಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಚಿತ್ರದುರ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಇದೇ ಮೇ.20ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಸಂದರ್ಶನದಲ್ಲಿ ಕರಾವಳಿ ಟೀಚರ್ಸ್ ಹೆಲ್ಪ್ ಲೈನ್ ಸಂಸ್ಥೆಯಲ್ಲಿ ಖಾಲಿ ಇರುವ ಟೀಚರ್ಸ್, ನಾನ್ ಟೀಚಿಂಗ್, ವಾರ್ಡ್‍ನ್ ಮುಂತಾದ ಹುದ್ದೆಗಳು ಮತ್ತು ಮುತ್ತೂಟ್ ಫೈನಾನ್ಸ್ ಅಭ್ಯರ್ಥಿಗಳನ್ನು ನೇರವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧಾರವಾಡದ ಕರಾವಳಿ ಟೀಚರ್ಸ್ ಹೆಲ್ಪ್ ಲೈನ್ ಸಂಸ್ಥೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾಲಿ ಇರುವ 60 ಟೀಚರ್ಸ್ ಹುದ್ದೆಗಳಿಗೆ ಬಿ.ಎ, ಬಿ.ಕಾಂ, ಬಿಸಿಎ, ಬಿ.ಎಸ್ಸಿ, ಡಿ.ಇಡಿ, ಬಿ.ಇಡಿ, ಎಂ.ಎ, ಎಂಕಾಂ, ಎಂಸಿಎಸ್ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಭಾಗವಹಿಸಬಹುದು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾಲಿ ಇರುವ ನಾನ್ ಟೀಚಿಂಗ್ 50 ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಬಿ.ಎ, ಬಿ.ಕಾಂ, ಬಿಸಿಎ, ಬಿಎಸ್ಸಿ, ಎಂ.ಎ, ಎಂ.ಕಾಂ, ಎಂಎಸ್ಸಿ ವಿದ್ಯಾರ್ಹತೆ ಹೊಂದಿರುವವರು ಭಾಗವಹಿಸಬಹುದು. ಚಿತ್ರದುರ್ಗ ಮುತ್ತೂಟ್ ಫೈನಾನ್ಸ್ ನಲ್ಲಿ ಚಿತ್ರದುರ್ಗ ಜಿಲ್ಲೆಯಾದ್ಯಂತ ಖಾಲಿ ಇರುವ ಜೆ.ಆರ್.ಇ 15 ಹುದ್ದೆಗಳಿಗೆ ಬಿ.ಎ, ಬಿ.ಕಾಂ, ಬಿಸಿಎ, ಬಿ.ಎಸ್ಸಿಯಲ್ಲಿ 2021 ರಿಂದ 2023ರೊಳಗೆ ಉತ್ತೀರ್ಣರಾಗಿರಬೇಕು.

ಆಸಕ್ತರು ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಫೋಟೋಸ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ನೇರ ನೇಮಕಾತಿ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 7022459064, 8310785143, 8105619020 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular