HomeKarnatakaಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್ 27 ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಉದ್ಯೋಗ ಮೇಳದಲ್ಲಿ ಪ್ಯಾಲೇಸ್ ಟೊಯಾಟೋ, ಕುಶಾಲನಗರ, ಅಟೋಲೈವ್ ಮಲ್ಟಿನ್ಯಾಷನಲ್ ಕಂಪನಿ, ಮೈಸೂರು, ಕ್ಲಬ್ ಮಹೀಂದ್ರ, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಪೆಂಟಟೆಕ್, ಮಡಿಕೇರಿ, ಕಾವೇರಿ ಹೋಂಡಾ, ಕುಶಾಲನಗರ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ಸ್ವಯಂ-ವಿವರ (ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಈ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 8296020826 /8123312319 ಮೂಲಕ ಸಂಪರ್ಕಿಸಬಹುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular