HomeKarnatakaಉದ್ಯೋಗಾಕಾಂಕ್ಷಿಗಳೇ ಗಮನಿಸಿ : 3,700 ಹುದ್ದೆಗಳ ಸ್ಥಿತಿ `KPSC’ಯಿಂದ ವೆಬ್ ಸೈಟ್ ನಲ್ಲಿ ಪ್ರಕಟ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 3,700 ಹುದ್ದೆಗಳ ಸ್ಥಿತಿ `KPSC’ಯಿಂದ ವೆಬ್ ಸೈಟ್ ನಲ್ಲಿ ಪ್ರಕಟ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 3,700 ಹುದ್ದೆಗಳಿಗೆ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆಯ ಸ್ಥಿತಿ-ಗತಿಯ ವಿವರಗಳನ್ನು ಕರ್ನಾಟಕ ಲೋಕಸೇವಾ ಆಯೋಗ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದ ಆಕಾಂಕ್ಷಿಗಳು ಉದ್ಯೋಗಕ್ಕಾಗಿ ಕಾಯುತ್ತಿರುತ್ತಾರೆ. ಕಚೇರಿಗೆ ಕರೆ ಮಾಡುವುದು, ಇಮೇಲ್ ಕಳುಹಿಸುವುದು ಸೇರಿದಂತೆ ವಿವಿಧ ಮಾಹಿತಿ ಕೋರಿ ನಿರಂತರವಾಗಿ ವಿಚಾರಿಸುತ್ತಾರೆ. ಹೀಗಾಗಿ ಆನ್ ಲೈನ್ ನಲ್ಲಿ ಕೆಪಿಎಸ್ ಸಿ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿವಿಧ ಇಲಾಖೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೆಪಿಎಸ್ ಸಿ ವೆಬ್ ಸೈಟ್ ನಲ್ಲೇ ಸ್ಥಿತಿ-ಗತಿಯ ವಿವರಗಳನ್ನು ಅಪ್ಲೋಡ್ ಮಾಡಲಾಗಿದ್ದು, ಆನ್ ಲೈನ್ ನಲ್ಲೇ ಅಭ್ಯರ್ಥಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಕೆಪಿಎಸ್ ಸಿ ಕಾರ್ಯದರ್ಶಿ ಕೆ.ಎಸ್. ಲತಾ ಕುಮಾರ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular