HomeLatest Newsಉದ್ಯೋಗಾಂಕ್ಷಿಗಳೇ ಗಮನಿಸಿ : ಮಾ.5 ರಂದು ಹಾಸನದಲ್ಲಿ ಬೃಹತ್ 'ಉದ್ಯೋಗ ಮೇಳ'  ಆಯೋಜನೆ

ಉದ್ಯೋಗಾಂಕ್ಷಿಗಳೇ ಗಮನಿಸಿ : ಮಾ.5 ರಂದು ಹಾಸನದಲ್ಲಿ ಬೃಹತ್ ‘ಉದ್ಯೋಗ ಮೇಳ’  ಆಯೋಜನೆ

ಹಾಸನ : ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಹಾಸನ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಮಾ 5 ರಂದು ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗುತ್ತದೆ ಜಿ.ಪಂ ಮುಖ್ಯ ಕಾರ್ಯ ನಿರ್ವಾಣಾಧಿಕಾರಿ ಬಿ.ಆರ್ ಪೂರ್ಣಿಮಾ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಂಭಾಗಣದಲ್ಲಿ ಜಿಲ್ಲೆಯಲ್ಲಿ ಉದ್ಯೋಗ ಆಯೋಜಿಸುವ ಕುರಿತು ಇಂದು ನಡೆದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉದ್ಯೋಗ ಮೇಳದಲ್ಲಿ ಜಿಲ್ಲೆಯ ಎಲ್ಲಾ ಪದವಿ, ಡಿಪ್ಲೋಮೋ, ಐಟಿಐ ಕಾಲೇಜಿಗಳ ಪದವೀಧರ ವಿದ್ಯಾರ್ಥಿ ಗಳು ಪಾಲ್ಗೊಗೊಳ್ಳುವಂತೆ ಮಾಹಿತಿ ನೀಡಿಲು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು ಅರ್ಹತೆ ಇರುವ ಪ್ರತಿಯೊಬ್ಬ ಅಭ್ಯರ್ಥಿಗೂ ಉದ್ಯೋಗ ದೊರೆಯಬೇಕು, ಉದ್ಯೋಗ ಆಕ್ಷಾಂಕಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಸರ್ಕಾರದಿಂದಲೇ ಉದ್ಯೋಗ ಮೇಳ ಆಯೋಜಿಸಿ ಖಾಸಗಿ ಕೈಗಾರಿಕೆಗಳಲ್ಲಿ ಉದ್ಯೋಗ ಕಲ್ಪಿಸಲು ಈ ಉದ್ಯೋಗ ಮೇಳೆ ಆಯೋಜಿಸಲಾಗುತ್ತಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದ್ಯೋಗ ಮೇಳದ ಯಶಸ್ವಿ ನಿರ್ವಹಣೆಗಾಗಿ ಪ್ರತಿ ತಾಲ್ಲೂಕಿಗೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲು ಹಾಗೂ ಮೇಳದ ಸಂಪೂರ್ಣ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮೀಣ ಭಾಗದ ಯುವಕರಿಗೆ ಮಾಹಿತಿ ತಲುಪಿಸಲು ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಕ ಅಧಿಕಾರಿಗಳಿಗೂ ಹಾಗೂ ನಗರ ಪ್ರದೇಶಗಳಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಮತ್ತು ಆಯುಕ್ತರುಗಳಿಗೆ ತಿಳಿಸುವಂತೆ ತಿಳಿಸಿದರು.

ಆಕಾಶವಾಣಿ, ಪತ್ರಿಕೆಗಳಲ್ಲಿ, ಸ್ಥಳೀಯ ಚಾನೆಲೆಗಳಲ್ಲಿ ಬ್ಯಾನರ್ಗಳು, ಹಾಗೂ ಬಸ್ ನಿಲ್ದಾಣದಲ್ಲಿ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ತಿಳಿಸಿದರು.ಮುಖ್ಯವಾಗಿ ಉದ್ಯೋಗದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಮೋಬೈಲ್ಗಳ ಮೂಲಕ ಸಂದೇಶಗಳನ್ನು ಕಳುಹಿಸಲು ಕ್ರಮವಹಿಸುವಂತೆ ಅಭ್ಯರ್ಥಿಗಳ ಅನುಕೂಲಕ್ಕಾಗಿ ಕಾಲೇಜು ಆವರಣದಲ್ಲಿ ಕಂಪನಿಗಳ ವಿವರ ಹಾಗೂ ಸಂದರ್ಶನ ನಡೆಯುವ ಕೊಠಡಿಗಳ ಮಾಹಿತಿಯ ಪಟ್ಟಿಯನ್ನು ಪ್ರದರ್ಶಿಸಲಾಗುವುದು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಲೇಜು ಪ್ರಾಂಶುಪಾಲರುಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular