ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಮೈಸೂರು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವು ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಅಕ್ಟೋಬರ್, 17 ರಂದು ನಡೆಯಲಿದೆ.
ಈ ಉದ್ಯೋಗಮೇಳಕ್ಕೆ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಹತೆಯನ್ನು ಹೊಂದಿರುವ ನಿರುದ್ಯೋಗ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ವಲಯಗಳ 200ಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು.
ಉದ್ಯೋಗದಾತರು ಹಾಗೂ ಉದ್ಯೋಗಾಕಾಂಕ್ಷಿಗಳು https://udyogamela.ksdckarnataka.com ಗೆ ಭೇಟಿ ನೀಡಿ ನೋಂದಣಿಯಾಗಲು ಕೋರಿದೆ. ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡಿರುವ ಯುವಕ/ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಮೇಳದಲ್ಲಿ ಭಾಗವಹಿಸಲು ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ ರವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ.