HomeKarnatakaJOB FAIR : ಉದ್ಯೋಗಾಂಕ್ಷಿಗಳೇ ಗಮನಿಸಿ : ಮಡಿಕೇರಿಯಲ್ಲಿ ನಾಳೆ ಜಿಲ್ಲಾ ಮಟ್ಟದ ಉದ್ಯೋಗ ಮೇಳ

JOB FAIR : ಉದ್ಯೋಗಾಂಕ್ಷಿಗಳೇ ಗಮನಿಸಿ : ಮಡಿಕೇರಿಯಲ್ಲಿ ನಾಳೆ ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಮಡಿಕೇರಿ : ಸಂಜೀವಿನಿ ಕೆಎಸ್ಆರ್ಎಲ್ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಉದ್ಯೋಗ ಮೇಳವು ಮಾರ್ಚ್, 08 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ) ಯಲ್ಲಿ ನಡೆಯಲಿದೆ.

ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಉದ್ಯೋಗ ಮೇಳ ನಡೆಯಲಿದ್ದು, ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸಲು ಉದ್ದೇಶಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಹಲವಾರು ಪ್ರತಿಷ್ಟಿತ ಕಂಪನಿಗಳು ಭಾಗವಹಿಸುತ್ತಿದ್ದು, ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆದ್ದರಿಂದ ಜಿಲ್ಲೆಯ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ/ ಯುವತಿಯರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular