HomeLatest NewsJOB FAIR : ಉದ್ಯೋಗಾಂಕ್ಷಿಗಳೇ ಗಮನಿಸಿ : ಕೊಡಗಿನಲ್ಲಿ ಜೂ.13 ರಂದು 'ಉದ್ಯೋಗ ಮೇಳ' ಆಯೋಜನೆ

JOB FAIR : ಉದ್ಯೋಗಾಂಕ್ಷಿಗಳೇ ಗಮನಿಸಿ : ಕೊಡಗಿನಲ್ಲಿ ಜೂ.13 ರಂದು ‘ಉದ್ಯೋಗ ಮೇಳ’ ಆಯೋಜನೆ

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್, 13 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ‘ಉದ್ಯೋಗಮೇಳ’ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ ಟೀಷರ್ ದಿ ಟೆಕ್ನಿಕಲ್ ಸರ್ವೀಸ್ (Techser the technical service, Mysore), ಕಲ್ಯಾಣಿ ಮೋಟಾರ್ಸ್ ಮಡಿಕೇರಿ, ಮುತ್ತೂಟ್ ಪೈನಾನ್ಸ್, ಮೈಸೂರು, ಅಪೋಲೋ ಫಾರ್ಮಸಿ, ಮೈಸೂರು, ತಾಜ್ ರೆಸಾಟ್ರ್ಸ್, ಮಡಿಕೇರಿ ಮತ್ತು ಕ್ಲಬ್ ಮಹೀಂದ್ರ ರೆಸಾರ್ಟ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ., ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್- 8296020826 ನ್ನು ಸಂಪರ್ಕಿಸಬಹುದು ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular