JOB FAIR : ಉದ್ಯೋಗಾಂಕ್ಷಿಗಳೇ ಗಮನಿಸಿ : ಮಾ.8 ರಂದು ಮಡಿಕೇರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಮಡಿಕೇರಿ : ಸಂಜೀವಿನಿ ಕೆಎಸ್ಆರ್ಎಲ್ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಮಾ.8 ರಂದು ಉದ್ಯೋಗ ಮೇಳ ನಡೆಯಲಿದೆ.

ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸುವ ಮೂಲಕ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಮಾರ್ಚ್, 08 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ) ಯಲ್ಲಿ ‘ಜಿಲ್ಲಾ ಮಟ್ಟದ ಉದ್ಯೋಗ ಮೇಳ’ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ ಹಲವಾರು ಪ್ರತಿಪ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು, ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಆದ್ದರಿಂದ ಜಿಲ್ಲೆಯ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ/ ಯುವತಿಯರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read