ಬಳ್ಳಾರಿ : ನಗರದ ಎಸ್.ಪಿ ವೃತ್ತದ ಪಾರ್ವತಿ ನಗರ ಬಡಾವಣೆಯ 1ನೇ ಮಹಡಿ ಅಭಿಕಾಂಪ್ಲೆಕ್ಸ್ನ ಡೋರ್ ನಂ-12ನ ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಮೇ 30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದು, ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುರುಷರಿಗೆ ಮಾತ್ರ ಅವಕಾಶ.
ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (ಬಯೋಡೇಟಾ) ಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 636040809 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.