HomeLatest NewsJOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ :  ಮೇ 30 ರಂದು ಬಳ್ಳಾರಿಯಲ್ಲಿ ನೇರ ಸಂದರ್ಶನ

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ :  ಮೇ 30 ರಂದು ಬಳ್ಳಾರಿಯಲ್ಲಿ ನೇರ ಸಂದರ್ಶನ

ಬಳ್ಳಾರಿ : ನಗರದ ಎಸ್.ಪಿ ವೃತ್ತದ ಪಾರ್ವತಿ ನಗರ ಬಡಾವಣೆಯ 1ನೇ ಮಹಡಿ ಅಭಿಕಾಂಪ್ಲೆಕ್ಸ್ನ ಡೋರ್ ನಂ-12ನ ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಮೇ 30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದು, ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುರುಷರಿಗೆ ಮಾತ್ರ ಅವಕಾಶ.

ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (ಬಯೋಡೇಟಾ) ಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 636040809 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular