HomeLatest NewsJOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ ; ಮೇ. 22 ರಂದು ನೇರ ಸಂದರ್ಶನ

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ ; ಮೇ. 22 ರಂದು ನೇರ ಸಂದರ್ಶನ

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ, 22 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ “ನೇರ ಸಂದರ್ಶನ” ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಜೆಕೆ ಟೈರ್ಸ್ ಮೈಸೂರು ಅವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ನೇರ ಸಂದರ್ಶನದಲ್ಲಿ ‘ಜೆಕೆ ಟೈಯರ್ಸ್ ಮೈಸೂರು’ ಇವರು ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೇರವು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ಅವರನ್ನು ಸಂಪರ್ಕಿಸಬಹುದು.

ಅರ್ಜಿ ಆಹ್ವಾನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಡಿಕೇರಿ : ಪ್ರಸಕ್ತ(2026-27) ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮೊ ಕೋರ್ಸ್ ಕಲಿಕೆಗಾಗಿ 39 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ(ಕರ್ನಾಟಕ)(22 ಅಭ್ಯರ್ಥಿಗಳು), ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ(ತಮಿಳುನಾಡು) 12 ಅಭ್ಯರ್ಥಿಗಳು, ಎಸ್‍ಪಿಕೆಎಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ(ನೆಲ್ಲೂರು ಜಿಲ್ಲೆ, ಆಂದ್ರಪ್ರದೇಶ) 03 ಅಭ್ಯರ್ಥಿಗಳು ಹಾಗೂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು(ಕೇರಳ) (02 ಅಭ್ಯರ್ಥಿಗಳು) ಈ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500 ರಂತೆ ಶಿಷ್ಯ ವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.

ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2026 ರ ಜುಲೈ, 01 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ.

ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾಯ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುವುದು. ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಮತ್ತು ಅರ್ಜಿ ಫಾರಂಗಳಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ಮೊ.ಸಂ.9916143619 ಅಥವಾ ಆಯಾಯ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ(ಡಿಐಸಿ), ಕೊಹಿನೂರು ರಸ್ತೆ, ಮಡಿಕೇರಿ ದೂ.ಸಂ.08272-220365 ನ್ನು ಸಂಪರ್ಕಿಸಬಹುದು.

ಅರ್ಜಿಯನ್ನು ಆನ್‍ಲೈನ್‍ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಲು ಲಿಂಕ್ https://khtigadag.ac.in/AdmissionForm.pdf ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಲು ಮೇ, 27 ಕೊನೆಯ ದಿನವಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ತಿಳಿಸಿದ್ದಾರೆ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular