ಹಾಸನ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಮತ್ತು ಮಿಲ್ಕ್ ರಶ್ ಫಾರ್ಮ್ಸ್ & ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಶಕ್ತಿ ಟೊಯೋಟಾ ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ನೀಡುವ ಸಂಬಂಧ ಸೆ.11 ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನ ನಡೆಯಲಿದ್ದು, ಎಸ್ಎಸ್ಎಲ್ಸಿ, ಐಟಿಐ, ಡಿಪ್ಲೊಮಾ, ಪಿಯುಸಿ, ಯಾವುದೇ ಪದವಿ ಪಾಸಾದ ಪುರುಷ/ಮಹಿಳಾ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಈ ಮೂಲಕ ಕೋರಲಾಗಿದೆ.
ದೂರವಾಣಿ ಸಂಖ್ಯೆ : 08172-296374, 9743144950, ಹಾಗೂ 8722606874, ರವರನ್ನು ಕಚೇರಿ ವೇಳೆಯಲ್ಲಿ ಮಾತ್ರ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಸಂದರ್ಶನ ನಡೆಯುವ ಸ್ಥಳ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರೈಲ್ವೇ ಸ್ಟೇಷನ್ ಹತ್ತಿರ, ಸರ್ಕಾರಿ ಐ.ಟಿ.ಐ. ಕಾಲೇಜು ಆವರಣ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೊಗಾಧಿಕಾರಿಗಳು ತಿಳಿಸಿದ್ದಾರೆ.