ಕೊಡಗು ಜಿಲ್ಲಾ ಆಯುಷ್ ಇಲಾಖೆಯ ಅಧೀನದಲ್ಲಿರುವ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಖಾಲಿ ಇರುವ ಸ್ತ್ರೀರೋಗ ಅಟೆಂಡರ್-01 ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್, 04 ರಂದು ಬೆಳಗ್ಗೆ 11.30 ಗಂಟೆಗೆ ನೇರ ಸಂದರ್ಶನವು ಜಿಲ್ಲಾ ಆಯುಷ್ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ಹಾಗೂ ಸಮಿತಿ ಸದಸ್ಯರ ಸಮ್ಮುಖದಲ್ಲಿ ನಡೆಯಲಿದೆ.
ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ನಿಗದಿತ ಸಮಯಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣ, ಜಿಲ್ಲಾಧಿಕಾರಿಗಳ ಕಚೇರಿ, ಮಡಿಕೇರಿ ಇಲ್ಲಿ ಹಾಜರಾಗುವಂತೆ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಆಯುಷ್ ಅಧಿಕಾರಿ ಅವರು ತಿಳಿಸಿದ್ದಾರೆ.