HomeLatest Newsಕೆಲಸ ಸಿಗದೇ ಯುವ ಬಾಕ್ಸಿಂಗ್ ಪಟು ಆತ್ಮಹತ್ಯೆ

ಕೆಲಸ ಸಿಗದೇ ಯುವ ಬಾಕ್ಸಿಂಗ್ ಪಟು ಆತ್ಮಹತ್ಯೆ

ಉಡುಪಿ: ಸರಿಯಾದ ಕೆಲಸ ಸಿಗದ ಚಿಂತೆಯಲ್ಲಿ ರಾಷ್ಟ್ರಮಟ್ಟದ ಯುವ ಬಾಕ್ಸಿಂಗ್ ಪಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಲ್ಪೆ ಪಡುಕರೆಯ ಶಾಂತಿನಗರದಲ್ಲಿ ಮಂಗಳವಾರ ಬೆಳಗ್ಗೆ ಘಟನೆ ನಡೆದಿದೆ. ವೀರಜ್ ಮೆಂಡನ್(29) ಮೃತಪಟ್ಟವರು. ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ಆಗಿದ್ದ ಅವರು ಸರಿಯಾದ ಕೆಲಸ ಸಿಗದೇ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕ್ರೀಡಾಕೂಟದಡಿ ಕೆಲಸ ಸಿಗುವ ಭರವಸೆ ಹೊಂದಿದ್ದ ಅವರು ಸರಿಯಾದ ಕೆಲಸ ಸಿಗದ ಕಾರಣ ಖಿನ್ನತೆಗೆ ಒಳಗಾಗಿದ್ದರು. ಇದರಿಂದ ಮನನೊಂದು ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular