HomeKarnatakaಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ: ನೋಂದಣಿ ಮಾಡಿಕೊಳ್ಳಲು ಅಭ್ಯರ್ಥಿಗಳಿಗೆ ಸೂಚನೆ

ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ: ನೋಂದಣಿ ಮಾಡಿಕೊಳ್ಳಲು ಅಭ್ಯರ್ಥಿಗಳಿಗೆ ಸೂಚನೆ

ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಡಿಡಿಯುಜಿಕೆವೈ, ಜಿಲ್ಲಾ ಗ್ಯಾಂರಂಟಿ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಮಾರ್ಚ್ 1 ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಲಾಗಿದೆ.

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಕೂಡಲೆ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಉದ್ಯೋಗ ಮೇಳದಲ್ಲಿ ರಾಜ್ಯದ ಪ್ರತಿಷ್ಠಿತ ಕಂಪನಿಗಳು ಉದ್ಯೋಗ ನೀಡುವ ಸಲುವಾಗಿ ಭಾಗವಹಿಸಲಿವೆ. 18 ರಿಂದ 35 ವರ್ಷದ ವಯೋಮಿತಿಯ ವಿವಿಧ ವಿದ್ಯಾರ್ಹತೆಗಳನ್ನು ಹೊಂದಿರುವ ನಿರುದ್ಯೋಗ ಯುವಕ-ಯುವತಿಯರು ಆನ್ ಲೈನ್‍ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಂಡು, ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೊಂದಣಿಗಾಗಿ ಜಿಲ್ಲಾ ಅಧಿಕೃತ ವೆಬ್‍ಸೈಟ್ ಹಾಗೂ ಜಾಹೀರಾತಿನಲ್ಲಿ ನೀಡಲಾಗಿರುವ ಗೂಗಲ್ ಫಾರ್ಮ್ ಲಿಂಕ್:  https://forms.gle/7pTxbGPVKAFCSYaX7 ಹಾಗೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ನೋಂದಣಿ ಮಾಡಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular