HomeJobsಎಸ್ಎಸ್ಎಲ್ಸಿ, ಪಿಯುಸಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ: ಇಲ್ಲಿದೆ ಮಾಹಿತಿ

ಎಸ್ಎಸ್ಎಲ್ಸಿ, ಪಿಯುಸಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ: ಇಲ್ಲಿದೆ ಮಾಹಿತಿ

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್-ಇಂಟರ್‌ವ್ಯೂವ್ ಅನ್ನು ಜುಲೈ 20 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಪ್ಪಳ ಜಿಲ್ಲಾ ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಅಥವಾ ಯಾವುದೇ ಪದವಿ, ಎಂ.ಎಸ್.ಡಬ್ಲ್ಯೂ, ಬಿ.ಇ ಅಥವಾ ಎಂ ಟೆಕ್-ಇ & ಸಿ, ಬಿ.ಇ ಅಥವಾ ಎಂ ಟೆಕ್-ಇ & ಇ ಹಾಗೂ ಬಿ.ಇ ಅಥವಾ ಎಂ ಟೆಕ್ ಮೆಕ್ಯಾನಿಕಲ್ ಬೋಧನಾ ಕ್ಷೇತ್ರದಲ್ಲಿ ಆಸಕ್ತಿವುಳ್ಳವರು ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಬಹುದು.

18 ರಿಂದ 40 ವರ್ಷದ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ(ರೆಜ್ಯುಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದ್ಯೋಗಾಕಾಂಕ್ಷಿಗಳು https://forms.gle/dAnyb4cmGHbecveN9 ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular