ಕೊಡಗು ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. ರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹರು ಫೆಬ್ರವರಿ 13ರೊಳಗೆ ಅರ್ಜಿ ಸಲ್ಲಿಸಬಹುದು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ಕಚೇರಿಯಲ್ಲಿ ಹೊಸದಾಗಿ ಸೃಜಿಸಿರುವ ರಕ್ಷಣಾಧಿಕಾರಿ (ಅಸಾಂಸ್ಥಿಕ) ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಸೋಶಿಯಲ್ ವರ್ಕ್, ಸೋಶಿಯಾಲಾಜಿ ಮನಃಶಾಸ್ತ್ರ, ಸಮುದಾಯ ಅಭಿವೃದ್ಧಿ ಮಹಿಳಾ ಅಧ್ಯಯನ, ಗೃಹ ವಿಜ್ಞಾನ ಇವುಗಳಲ್ಲಿ ಯಾವುದಾದರೊಂದರಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಇರಬೇಕು. ಮಕ್ಕಳ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಅನುಭವ ಇರಬೇಕು. ಈ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಗೌರವ ಧನ ರೂ. 27,804 ಆಗಿರುತ್ತದೆ. ಇಚ್ಛೆಯುಳ್ಳ ಅಭ್ಯರ್ಥಿಗಳು ತಮ್ಮ ಸ್ವ ವಿವರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರಗಳ ನಕಲುಗಳೊಂದಿಗೆ ಅರ್ಜಿಯನ್ನು ಫೆಬ್ರವರಿ 13 ರೊಳಗೆ ಸಲ್ಲಿಸಬೇಕು.
ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ: ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಂತಿ ನಿಲಯ, ಕಾನ್ವೆಂಟ್ ಜಂಕ್ಷನ್, ಮಡಿಕೇರಿ, ಕೊಡಗು ಜಿಲ್ಲೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 08272-228800.
ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್: ಕೊಪ್ಪಳದ ತಿಕೋಟಿಕರ್ ಪೆಟ್ರೋಲ್ ಬಂಕ್ ಹತ್ತಿರದ ಟೈಗರ್ ಕ್ಯಾಪಿಟಲ್ ಪ್ರೈ. ಲಿ., ವತಿಯಿಂದ ಫೆಬ್ರವರಿ 12 ರಂದು ಬೆಳಗ್ಗೆ 9 ಗಂಟೆಯಿಂದ 1 ಗಂಟೆಯವರೆಗೆ ವಾಕ್ ಇನ್ ಇಂಟರ್‌ವ್ಯೂವ್ ಆಯೋಜಿಸಲಾಗಿದೆ.
ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆ ಖಾಲಿ ಇದ್ದು, ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಕುಕನೂರು, ಗಂಗಾವತಿ ತಾಲ್ಲೂಕುಗಳಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ 18 ರಿಂದ 30 ವರ್ಷ ನಿರುದ್ಯೋಗಿ ಯುವಕರು ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 2 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡ್‌ನ ಪ್ರತಿ, ಬಯೋಡಾಟಾ ಹಾಗೂ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಈ ನೇರ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಉಚಿತ ಪ್ರವೇಶವಿದ್ದು, ಯಾವುದೇ ಶುಲ್ಕ ಇರುವುದಿಲ್ಲ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು.

