ಶಿವಮೊಗ್ಗ: ಜೋಗ್ ಫಾಲ್ಸ್ ನ ಅಪಾಯಕಾರಿ ಸ್ಥಳಕ್ಕೆ ತೆರಳಿ ವಿಡಿಯೋ ಚಿತ್ರೀಕರಣ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಜಾಲಹಳ್ಳಿ ಮೂಲದ ಗೌತಮ್ ಅರಸು (32) ಹಾಗೂ ಸೊರಬ ಮೂಲದ ಗೈಡ್ ಸಿದ್ದರಾಜು ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೌತಮ್ ಅರಸು, ಜೋಗ್ ಫಾಲ್ಸ್ ನ ರಾಜಾ ಫಾಲ್ಸ್ ನ ಬಂಡೆಯ ಬಳಿ ನಿಂತು ವಿಡಿಯೋ ಮಾಡಿ ಯೂಟ್ಯೂಬ್ ಗೆ ಅಪ್ ಲೋಡ್ ಮಾಡಿದ್ದರು. ಅಪಾಯಕಾರಿ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದ ಹಿನ್ನೆಲೆಯಲ್ಲಿ ಸಿದ್ದಾಪುರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.